ರೋರಿಂಗ್ ಸ್ಟಾರ್ ಶ್ರೀಮುರಳಿ ಅಭಿನಯದ ಚೇತನ್ ಕುಮಾರ್ ನಿರ್ದೇಶನದ ‘ಭರಾಟೆ’ ಭರ್ಜರಿ ಓಪನಿಂಗ್ ಪಡೆದುಕೊಂಡಿದೆ. ಬಿಡುಗಡೆಯಾದ ದಿನದಿಂದಲೂ ಯಶಸ್ವಿ ಪ್ರದರ್ಶನದೊಂದಿಗೆ ಮುನ್ನುಗ್ಗುತ್ತಿದೆ.
ಮಾತ್ರವಲ್ಲ, ಗಳಿಕೆಯಲ್ಲಿಯೂ ದಾಖಲೆ ಬರೆದಿರುವ ‘ಭರಾಟೆ’ ಮೊದಲ ದಿನ 8 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿದ್ದು, ಬಿಡುಗಡೆಯಾದ 6 ದಿನದಲ್ಲಿ ಸುಮಾರು 30 ಕೋಟಿ ರೂ.ಗೂ ಅಧಿಕ ಕಲೆಕ್ಷನ್ ಮಾಡಿದೆ ಎಂದು ಹೇಳಲಾಗಿದೆ. ಮೊದಲಿಂದಿದಲು ಭಾರೀ ನಿರೀಕ್ಷೆ ಮೂಡಿಸಿದ್ದ ‘ಭರಾಟೆ’ ಅಕ್ಟೋಬರ್ 18 ರಂದು ತೆರೆಕಂಡಿದ್ದು, ಎಲ್ಲಾ ಕಡೆಗಳಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಬಾಕ್ಸ್ ಆಫೀಸ್ ಗಳಿಕೆಯಲ್ಲಿಯೂ ಭಾರೀ ಸೌಂಡ್ ಮಾಡುತ್ತಿದೆ.