ಮೈಸೂರಿನಲ್ಲಿ ಸೋಲಿಸಿದಂತೆ ಬಾದಾಮಿ ಕ್ಷೇತ್ರದ ಮತದಾರರೂ ಮಾಡಿದ್ದರೆ ನಾನು ಮನೆಯಲ್ಲಿರಬೇಕಿತ್ತು ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ನೀವು ಆಶೀರ್ವಾದ ಮಾಡಿದ್ದರಿಂದಲೇ ನಾನು ಇದೀಗ ವಿರೋಧ ಪಕ್ಷದ ನಾಯಕನಾಗಿದ್ದೇನೆ ಎಂದರು.
ಆದರೆ ನಂತರ ರಾಜ್ಯ ರಾಜಕಾರಣದಲ್ಲಿ ಹಲವು ಬೆಳವಣಿಗೆಗಳು ನಡೆದಿದ್ದು, ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷ ಬಹುಮತ ಪಡೆಯದ ಕಾರಣ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡು ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದರು.ಇದರ ಮಧ್ಯೆ ಉಭಯ ಪಕ್ಷಗಳ ಹಲವು ಶಾಸಕರು ರಾಜೀನಾಮೆ ನೀಡಿದ ಕಾರಣ ಮೈತ್ರಿ ಸರ್ಕಾರ ಪತನಗೊಂಡು ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದ್ದು, ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾರೆ