ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕೂಟ ಸರ್ಕಾರದಲ್ಲಿ ಕಾವೇರಿ ನಿವಾಸ ಸಚಿವ ಕೆ.ಜೆ. ಜಾರ್ಜ್ ಅವರಿಗೆ ಮಂಜೂರಾಗಿದ್ದು, ಅದನ್ನು ಸಿದ್ದರಾಮಯ್ಯ ಅವರಿಗೇ ಜಾರ್ಜ್ ಬಿಟ್ಟುಕೊಟ್ಟಿದ್ದರು. ಈಗ ಕುಮಾರಪಾರ್ಕ್ ನ ರೈಲ್ವೆ ಮಾರ್ಗದ ಬದಿಯಲ್ಲಿರುವ ಬಂಗಲೆಯನ್ನು ಮಂಜೂರು ಮಾಡುವಂತೆ ಕೋರಿ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಪತ್ರ ಬರೆದಿದ್ದಾರೆ.
ಇದೀಗ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದ್ದು ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾರೆ. ಕಾವೇರಿ ನಿವಾಸಕ್ಕೆ ಶಿಫ್ಟ್ ಆಗಲು ಯಡಿಯೂರಪ್ಪ ಬಯಸಿದ್ದು, ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯನವರು ಕಾವೇರಿ ನಿವಾಸವನ್ನು ತೆರವುಗೊಳಿಸುವುದು ಅನಿವಾರ್ಯವಾಗಿದೆ