ದೆಹಲಿಯ ಸೋನಿಯಾ ಗಾಂಧಿ ಅವರ ನಿವಾಸಕ್ಕೆ ಭೇಟಿ ನೀಡಿದ್ದ ಡಿ.ಕೆ. ಶಿವಕುಮಾರ್, ಸೋನಿಯಾಗಾಂಧಿ ಮತ್ತು ರಾಹುಲ್ ಗಾಂಧಿ ಅವರೊಂದಿಗೆ ಚರ್ಚೆ ನಡೆಸಿದ್ದಾರೆ. ಡಿ.ಕೆ. ಶಿವಕುಮಾರ್ ಅವರೊಂದಿಗೆ ಸಂಸದ ಡಿ.ಕೆ. ಸುರೇಶ್, ವಿಧಾನಪರಿಷತ್ ಸದಸ್ಯ ಎಸ್. ರವಿ, ಶಾಸಕ ಡಾ. ರಂಗನಾಥ್ ಮೊದಲಾದವರಿದ್ದರು. ಡಿಕೆಶಿಗೆ ಪಕ್ಷದಲ್ಲಿ ಮಹತ್ವದ ಹುದ್ದೆ ನೀಡುವ ಕುರಿತಾಗಿ ಈ ಸಂದರ್ಭದಲ್ಲಿ ಚರ್ಚೆ ನಡೆದಿದೆ ಎನ್ನಲಾಗಿದೆ.
ಸಂಸದ ಡಿ.ಕೆ. ಸುರೇಶ್ ಅವರ ದೆಹಲಿ ನಿವಾಸದಲ್ಲಿ ವಾಸ್ತವ್ಯ ಹೂಡಿರುವ ಡಿ.ಕೆ. ಶಿವಕುಮಾರ್ ದೆಹಲಿಯಲ್ಲಿ ಪಕ್ಷದ ನಾಯಕರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ್ದಾರೆ ಎನ್ನಲಾಗುತ್ತಿದೆ .