ಬಿಗ್ಬಾಸ್ ಕಾರ್ಯಕ್ರಮದ ಮೊದಲನೇ ವಾರದ ಎಲಿಮಿನೇಷನ್ ನಲ್ಲಿ ಗುರುಲಿಂಗ ಸ್ವಾಮೀಜಿ ಅವರು ಎಲಿಮಿನೇಟ್ ಆಗಿದ್ದರು. ಇನ್ನು ಈ ಬಾರಿಯ ಎರಡನೇ ವಾರದ ಎಲಿಮಿನೇಷನ್ಗೆ ಬಿಗ್ಬಾಸ್ ಮನೆಯ ಒಟ್ಟು ಆರು ಸ್ಪರ್ಧಿಗಳು ನಾಮಿನೇಟ್ ಆಗಿದ್ದರು. ನಾಮಿನೇಟ್ ಆಗಿದ್ದ ಆರು ಮಂದಿ ಸ್ಪರ್ಧಿಗಳ ಪೈಕಿ ಈ ವಾರ ಯಾವ ಸ್ಪರ್ಧಿ ಮನೆಯಿಂದ ಹೊರ ಹೋಗಲಿದ್ದಾರೆ ಎಂಬ ಕುತೂಹಲ ಎಲ್ಲ ವೀಕ್ಷಕರಲ್ಲಿ ಮನೆ ಮಾಡಿತ್ತು.
ಇನ್ನು ಎರಡನೇ ವಾರ ಬಿಗ್ ಬಾಸ್ ಮನೆಯಿಂದ ಸ್ಪರ್ಧಿ ಚೈತ್ರಾ ವಾಸುದೇವನ್ ಅವರು ಹೊರ ನಡೆದಿದ್ದಾರೆ ಎಂಬ ಸುದ್ದಿ ಇದೆ. ಹೌದು ಕಿರುತೆರೆಯಲ್ಲಿ ವಿಡಿಯೊ ಜಾಕಿ ಆಗಿ ಕೆಲಸ ಮಾಡುತ್ತಿದ್ದ ಚೈತ್ರಾ ವಾಸುದೇವನ್ ಅವರು ಬಿಗ್ ಬಾಸ್ ಮನೆಗೆ ಸ್ಪರ್ಧಿಯಾಗಿ ಆಗಮಿಸಿದ್ದರು. ಎರಡನೇ ವಾರ ನಡೆದ ನಾಮಿನೇಷನ್ ಪ್ರಕ್ರಿಯೆಯಲ್ಲಿ ಇವರು ನಾಮಿನೇಟ್ ಆಗಿ ತದನಂತರ ಎಲಿಮಿನೇಟ್ ಆಗಿ ಮನೆಯಿಂದ ಹೊರ ಬಂದಿದ್ದಾರೆ ಎನ್ನಲಾಗುತ್ತಿದೆ.