ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಅನರ್ಹ ಶಾಸಕರ ಕುರಿತಂತೆ ಅನಗತ್ಯ ಹೇಳಿಕೆ ನೀಡುವ ಮೂಲಕ ಗೊಂದಲ ಮೂಡಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪನವರ ಆಪ್ತ ವಲಯದಲ್ಲಿ ಮಾತು ಕೇಳಿಬರುತ್ತಿತ್ತು, ಇದಕ್ಕೆ ಪುಷ್ಟಿ ನೀಡುವಂತೆ ಸಿಎಂ ರಾಜಕೀಯ ಕಾರ್ಯದರ್ಶಿ, ಹೊನ್ನಾಳ್ಳಿ ಕ್ಷೇತ್ರದ ಶಾಸಕ ರೇಣುಕಾಚಾರ್ಯ ಲಕ್ಷ್ಮಣ ಸವದಿ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.,
ದೇಶದ ಇತಿಹಾಸದಲ್ಲೇ ಚುನಾವಣೆಯಲ್ಲಿ ಸೋತವರೊಬ್ಬರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಲಾಗಿದೆ. ಇದನ್ನು ಲಕ್ಷ್ಮಣ ಸವದಿ ಅರ್ಥ ಮಾಡಿಕೊಳ್ಳಬೇಕಿದೆ ಎಂದರಲ್ಲದೆ, ಅಲ್ಪನಿಗೆ ಐಶ್ವರ್ಯ ಬಂದರೆ ಅರ್ಧ ರಾತ್ರಿಯಲ್ಲಿ ಕೊಡೆ ಹಿಡಿದುಕೊಂಡ ಪರಿಸ್ಥಿತಿ ಅವರದ್ದಾಗಿದೆ ಎಂದು ರೇಣುಕಾಚಾರ್ಯ ವ್ಯಂಗ್ಯವಾಡಿದ್ದಾರೆ.