ಕುಮಾರಸ್ವಾಮಿಯವರು ಬಿಜೆಪಿಗೆ ಬೆಂಬಲ ನೀಡುವುದಾಗಿ ಈವರೆಗೂ ಎಲ್ಲೂ ಹೇಳಿಲ್ಲ. ಈ ಮಾತನ್ನು ದೇವೇಗೌಡರು ಹೇಳಲಿ. ಆಗ ವಿಚಾರ ಮಾಡೋಣ ಎಂದು ದೇವೇಗೌಡರಿಗೆ ಪರೋಕ್ಷವಾಗಿ ಜಗದೀಶ್ ಶೆಟ್ಟರ್ ಆಹ್ವಾನ ನೀಡಿದ್ದಾರೆ ಎನ್ನಲಾಗುತ್ತಿದೆ .
ನಾನು ಸರ್ಕಾರ ಬೀಳಿಸುವಂತಹ ಕೆಲಸ ಮಾಡುವುದಿಲ್ಲ. ನೆರೆ ಸಂತ್ರಸ್ತರಿಗೆ ನೆರವಾಗುವುದು ಮುಖ್ಯ. ಅವರ ಸಂಕಷ್ಟಗಳಿಗೆ ಸ್ಪಂದಿಸುವವರಿಗೆ ನಮ್ಮ ಬೆಂಬಲವಿರುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.