ಈಶ್ವರಪ್ಪ ಅವರು ಯಡಿಯೂರಪ್ಪ ಅವರು ಹೇಳಿದ ಹೇಳಿಕೆಗೆ ಹೀಗೆ ಹೇಳಿದ್ದಾರೆ ಯಡಿಯೂರಪ್ಪನವರು ಸಿದ್ದರಾಮಯ್ಯ ಪರಮನೆಂಟ್ ಆಗಿ ವಿಪಕ್ಷ ಸ್ಥಾನದಲ್ಲಿರುತ್ತಾರೆ ಎಂದಿದ್ದಾರೆ. ಅವರ ಈ ಹೇಳಿಕೆ ಸುಳ್ಳು. ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷದಲ್ಲೇ ಇರುವುದಿಲ್ಲ. ಅವರನ್ನು ಕಾಂಗ್ರೆಸ್ ನವರು ವಿರೋಧ ಪಕ್ಷದ ಸ್ಥಾನದಿಂದ ಕಿತ್ತು ಹಾಕುತ್ತಾರೆ ಎಂದು ಹೇಳಿದ್ದಾರೆ.
ಇದೇ ಸಂದರ್ಭದಲ್ಲಿ ಬಿಜೆಪಿ ಸರ್ಕಾರ ಪತನಗೊಳ್ಳಲು ಬಿಡುವುದಿಲ್ಲ ಎಂಬ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಹೇಳಿಕೆಯನ್ನು ಸ್ವಾಗತಿಸಿದ ಈಶ್ವರಪ್ಪ, ಆದರೆ ನಮಗೆ ಜೆಡಿಎಸ್ ಬೆಂಬಲದ ಅಗತ್ಯ ಬೀಳುವುದಿಲ್ಲ. ಉಪ ಚುನಾವಣೆಯಲ್ಲಿ ಬಿಜೆಪಿ ಅತ್ಯಧಿಕ ಸ್ಥಾನ ಗಳಿಸುತ್ತದೆ ಎಂದು ತಿಳಿಸಿದ್ದಾರೆ.