ವಿಧಾನಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಕಾಂಗ್ರೆಸ್ ನಿಯೋಗವು ರಾಜ್ಯಪಾಲ ವಿ.ಆರ್.ವಾಲಾ ಅವರನ್ನು ರಾಜಭವನದಲ್ಲಿ ಭೇಟಿಯಾಗಿ ಕೂಡಲೇ ಮುಖ್ಯಮಂತ್ರಿಗಳಿಂದ ರಾಜೀನಾಮೆ ಪಡೆಯಬೇಕು ಇಲ್ಲದಿದ್ದರೆ ಸರ್ಕಾರವನ್ನು ವಿಸರ್ಜಿಸಲು ಕೇಂದ್ರಕ್ಕೆ ಶಿಫಾರಸು ಮಾಡುವಂತೆ ಒತ್ತಾಯಿಸಿದರು.
ಯಡಿಯೂರಪ್ಪನವರ ಆಡಿಯೋವನ್ನು ಜೆಡಿಎಸ್ ಸೋಮವಾರ ಸುಪ್ರೀಂಕೋರ್ಟ್‍ಗೆ ಸಾಕ್ಷಿ ನೀಡಲಿದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದು. ಮುಂದಿನವಾರ ಅನರ್ಹ ಶಾಸಕರ ಅರ್ಜಿ ವಿಚಾರಣೆಯ ಅಂತಿಮ ತೀರ್ಪು ಹೊರಬೀಳುವ ಸಾಧ್ಯತೆ ಇದ್ದು ಆಡಿಯೋವನ್ನು ಸಾಕ್ಷಿಯನ್ನಾಗಿ ಪರಿಗಣಿಸಬೇಕೆಂದು ಮುಖ್ಯ ನ್ಯಾಯಮೂರ್ತಿ ರಂಜನ್ ಗೋಗಯ್ ನೇತೃತ್ವದ ತ್ರಿಸದಸ್ಯ ಪೀಠಕ್ಕೆ ದೂರು ನೀಡಲು ಕಾಂಗ್ರೆಸ್ ಮತ್ತು ಜೆಡಿಎಸ್ ತೀರ್ಮಾನಿಸಿವೆ ಎಂದು ಹೇಳಲಾಗುತ್ತಿದೆ.