ಯಡಿಯೂರಪ್ಪನವರು ಆಡಿದ ಮಾತಿನ ಆಡಿಯೋ ಈಗ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದೆ. ಈ ವಿಚಾರ ಈಗಾಗಲೇ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಕಾಂಗ್ರೆಸ್ ಪರ ವಕೀಲ ಕಪಿಲ್ ಸಿಬಲ್ ಮಾಡಿದ ಮನವಿಗೆ ಸ್ಪಂದಿಸಿರುವ ಸುಪ್ರೀಂ ಕೋರ್ಟ್, ಶಾಸಕರ ಅನರ್ಹತೆ ಕುರಿತ ವಿಚಾರಣೆ ವೇಳೆ ಈ ಆಡಿಯೋವನ್ನು ಪರಿಗಣಿಸುವುದಾಗಿ ಹೇಳಿದೆ.
ಈ ಆಡಿಯೋವನ್ನು ಬಹಿರಂಗಗೊಳಿಸಿದ್ದು ಯಾರು ಎಂಬ ಪ್ರಶ್ನೆ ಪ್ರತ್ಯಾರೋಪಗಳು ಕೇಳಿ ಬರುತ್ತಿದ್ದು, ಬಿಜೆಪಿ ನಾಯಕರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಆಡಿಯೋ ಬಹಿರಂಗಗೊಳಿಸಿದ ಹಿಂದಿನ ರೂವಾರಿ ಎಂದು ಹೇಳುತ್ತಿದ್ದಾರೆ. ಜೊತೆಗೆ ಸಿದ್ದರಾಮಯ್ಯನವರ ಕೆಲ ಆಡಿಯೋಗಳು ನಮ್ಮ ಬಳಿಯೂ ಇದೆ ಎಂದು ಕೂಡ ಹೇಳಿದ್ದಾರೆ ಎನ್ನಲಾಗುತ್ತಿದೆ.