ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿಯವರ ವಿರುದ್ಧ ಸರಣಿ ಆರೋಪ ಮಾಡಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಕೆಲವು ಶಾಸಕರುಗಳು ಇದೀಗ ಸಂದಿಗ್ಧ ಪರಿಸ್ಥಿತಿಗೆ ಸಿಲುಕಿದ್ದಾರೆ.
ಹಾಗಾಗಿ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಹಾಗೂ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ. ಕುಮಾರಸ್ವಾಮಿ ಚಾಣಾಕ್ಷ ನಡೆಯನ್ನಿಡುತ್ತಿದ್ದಾರೆ, ಬಿಜೆಪಿ ಜೊತೆ ಕೈ ಜೋಡಿಸುವ ಮಾತಿನ ಹಿಂದೆ ತಮ್ಮ ರಾಜಕೀಯ ಎದುರಾಳಿ ಸಿದ್ದರಾಮಯ್ಯನವರನ್ನು ಮಣಿಸುವ ಮುನ್ಸೂಚನೆ ಇದೆ ಎಂದು ರಾಜಕೀಯ ವಲಯದಲ್ಲಿ ಮಾತುಗಳು ಕೇಳಿಬರುತ್ತಿದೆ .