ಕಾಂಗ್ರೆಸ್- ಜೆಡಿಎಸ್ ಮೈತ್ರಿ ಉಳಿ ಯಲಿಲ್ಲ. ಅದರ ಫಲವನ್ನು ಲೋಕಸಭಾ ಚುನಾ ವಣೆಯಲ್ಲಿ ಅನುಭವಿಸಿದರು. ಬಿಜೆಪಿ ಪೂರ್ಣ ಬಹು ಮತ ಬರದಿದ್ದರೂ, ಬಿಜೆಪಿಯೇ ಆಡಳಿತ ನಡೆಸಬೇಕು ಎನ್ನುವ ವಾತಾವರಣ ಸೃಷ್ಟಿಯಾಗಿದೆ ಇದೀಗ ನಮಗೆ ಕೇಂದ್ರದಲ್ಲಿ ಬಹುಮತವಿದ್ದರೂ ಅನೇಕ ಪಕ್ಷಗಳು ಬೆಂಬಲ ನೀಡಿವೆ. ಅದೇ ರೀತಿ ಇಲ್ಲಿ ಜೆಡಿಎಸ್ ಬೆಂಬಲ ನೀಡಿದರೆ ಬೇಡ ಎನ್ನುವುದಿಲ್ಲ ಎಂದು ಈಶ್ವರಪ್ಪ ಅವರು ಹೇಳಿದರು.
ಕರ್ನಾಟಕದಲ್ಲಿ ಬಿಜೆಪಿ ಸದೃಢವಾಗಿ ಬೆಳೆಯುತ್ತಿದೆ. ಮಧ್ಯಂತರ ಚುನಾವಣೆ ಬರಲಿದೆ ಎಂದು ಎಲ್ಲರೂ ಕಾಯುತ್ತಿದ್ದಾರೆ. ಹಾಗೆ ಚುನಾವಣೆ ಏನಾದರೂ ಬಂದರೆ ಬಿಜೆಪಿಗೆ ಪೂರ್ಣ ಬಹುಮತ ದೊರೆಯಲಿದೆ ಅದರಲ್ಲಿ ಯಾವುದೇ ಅನುಮಾನ ಇಲ್ಲ ಎಂದು ಹೇಳಿದರು.