ರಾಜ್ಯದ ರಾಜಕೀಯ ವಲಯದಲ್ಲಿ ಹಲವಾರು ಸಂಚಲನಗಳು ಸೃಷ್ಟಿಯಾಗುತ್ತಿವೆ . ಉಪ ಚುನಾವಣೆ ಕೂಡ ನಡೆಯುವ ಸಾಧ್ಯತೆ ಇದೆ ಅದರ ಸಿದ್ಧತೆಯಲ್ಲಿ ರಾಜ್ಯದ ರಾಜಕೀಯ ಪಕ್ಷಗಳು ತಂತ್ರವನ್ನು ನಡೆಸುತ್ತಿವೆ ಹಾಗೆ ಅನರ್ಹ ಶಾಸಕರುಗಳ ಕ್ಷೇತ್ರಗಳಿಗೆ ಈಗಾಗಲೇ ಉಪ ಚುನಾವಣೆ ಘೋಷಣೆಯಾಗಿದ್ದು ನಾಳೆಯಿಂದಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಹೀಗಾಗಿ ಸುಪ್ರೀಂ ಕೋರ್ಟ್ ನಿಂದ ಬುಧವಾರ ಹೊರ ಬೀಳಲಿರುವ ತೀರ್ಪು ಅನರ್ಹ ಶಾಸಕರ ಪಾಲಿಗೆ ನಿರ್ಣಾಯಕವಾಗಲಿದೆ.
ಮುಖ್ಯಮಂತ್ರಿ ಯಡಿಯೂರಪ್ಪನವರು ನೀತಿ ಸಂಹಿತೆ ಘೋಷಣೆಯಾಗುವ ಮೊದಲೇ ಅನರ್ಹ ಶಾಸಕರುಗಳ ಕ್ಷೇತ್ರಗಳಿಗೆ ಬಿರುಸಿನ ಪ್ರವಾಸ ಕೈಗೊಂಡು, ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಜೊತೆಗೆ ಪರೋಕ್ಷ ಪ್ರಚಾರವನ್ನೂ ಕೈಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ .