ನಿನ್ನೆ ಟೌನ್‍ಹಾಲ್ ಎದುರು ಬೆಂಗಳೂರು ನಗರ ಜಿಲ್ಲಾ ಕಾಂಗ್ರೆಸ್ ಘಟಕಗಳ ಪ್ರತಿಭಟನಾ ಮೆರವಣಿಗೆ ಉದ್ಘಾಟಿಸಿದ ಸಿದ್ದ ರಾಮಯ್ಯ ಅವರು ಯಡಿಯೂರಪ್ಪ ಹಾಗು ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದರು , ಸಾಮಾಜಿಕ ಜಾಲತಾಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಯುವ ಸಮುದಾಯ ಮೋದಿಯವರಿಗೆ ಭಾರೀ ಪ್ರಮಾಣದಲ್ಲಿ ಬೆಂಬಲ ನೀಡಿತ್ತು. ಅವರಿಗೆಲ್ಲ ಮೊದಿ ಮೊಸ ಮಾಡಿದ್ದಾರೆ ಎಂದು ಹೇಳಿದರು .
ಹಾಗು ಅವರಿಗೆ ಪ್ರತಿವರ್ಷ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಮೋದಿ ಭರವಸೆ ನೀಡಿದ್ದರು. ಆದರೆ 2 ಲಕ್ಷ ಉದ್ಯೋಗ ಸೃಷ್ಟಿಯಾಗಿಲ್ಲ. ಬದಲಾಗಿ ಉದ್ಯೋಗಗಳ ಕಡಿತದ ಪ್ರಮಾಣ ಹೆಚ್ಚಾಗುತ್ತಿದೆ.ಕರ್ನಾಟಕದಲ್ಲಿ ಯಡಿಯೂರಪ್ಪ ಅವರು ಜನರ ಆಶೀರ್ವಾದದಿಂದ ಅಧಿಕಾರಕ್ಕೆ ಬಂದಿಲ್ಲ. ಕಾಂಗ್ರೆಸ್‍ನ 14 ಜನ ಶಾಸಕರನ್ನು ಕೊಂಡುಕೊಂಡು ಹಿಂಬಾಗಿಲ ಮೂಲಕ ಸರ್ಕಾರ ರಚಿಸಿದ್ದಾರೆ. ಆಪರೇಷನ್ ಕಮಲದಿಂದ 17 ಮಂದಿ ಶಾಸಕರು ರಾಜೀನಾಮೆ ಕೊಟ್ಟಿದ್ದಾರೆ. ಈಗ ಆ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಬೇಕಿದೆ. ಇಂತಹ ಪರಿಸ್ಥಿತಿಗೆ ಯಡಿಯೂರಪ್ಪ ಅವರೇ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದರು.