ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಕುಮಾರಸ್ವಾಮಿ ಅವರು ಡಿಸೆಂಬರ್ 10ರ ವಿಧಾನಸಭೆ ಉಪಚುನಾವಣೆ ಫಲಿತಾಂಶದ ನಂತರ ರಾಜ್ಯ ರಾಜಕೀಯದಲ್ಲಿ ಏನು ಬೇಕಾದರೂ ಬದಲಾವಣೆ ಯಾಗಬಹುದು. ರಾಜ್ಯದ ರಾಜಕೀಯ ಯಾವ ರೀತಿಯಲ್ಲಿ ಬೇಕಾದರು ತಿರುವು ಪಡೆಯಬಹುದು. ಹೀಗಾಗಿ ಎಲ್ಲರೂ ಜೆಡಿಎಸ್ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸೋಣ ಎಂದು ಕುಮಾರಸ್ವಾಮಿ ಅವರು ಪಕ್ಷದ ಮುಕಂಡರಿಗೆ ಹೇಳಿದ್ದಾರೆ.
ಈ ಉಪಚುನಾವಣೆ ನಮ್ಮ ಪಕ್ಷಕ್ಕೆ ಅಗ್ನಿಪರೀಕ್ಷೆಯಾಗಿದ್ದು, ಒಗ್ಗಟ್ಟಿನಿಂದ ಎದುರಿಸೊಣ. ಹೆಚ್ಚು ಸ್ಥಾನ ಗೆಲ್ಲುವ ಮೂಲಕ ಜೆಡಿಎಸ್ ಪ್ರಾಬಲ್ಯವನ್ನು ಮತ್ತೆ ಸಾಬೀತು ಪಡಿಸಬೇಕಿದೆ ಎಂಬ ಸಂದೇಶ ನೀಡಿದ್ದಾರೆ. ಪ್ರಸಕ್ತ ಉಪಚುನಾವಣೆಯಲ್ಲಿ ಕಾಂಗ್ರೆಸ್‍ನಲ್ಲಿ ಆಂತರಿಕ ಭಿನ್ನಮತವಿದ್ದು, ಹೆಚ್ಚು ಗೊಂದಲವಿದೆ. ಇದರಿಂದ ಉಪಚುನಾವಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಸಮಾನ ಅಂತರ ಕಾಯ್ದುಕೊಂಡು ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸೋಣ ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರೆ.