ಎಚ್.ಡಿ.ದೇವೇಗೌಡರು ಮುಖ್ಯಮಂತ್ರಿಯಾಗಿದ್ದಾಗ ಆರು ಮಂದಿ ಗೌಡರನ್ನು, ಎಸ್.ಎಂ.ಕೃಷ್ಣ ಮುಖ್ಯಮಂತ್ರಿಯಾಗಿದ್ದಾಗ ಎಂಟು ಮಂದಿ ಗೌಡರನ್ನು, ವೀರೇಂದ್ರ ಪಾಟೀಲ್ ಮುಖ್ಯಮಂತ್ರಿಯಾಗಿದ್ದಾಗ ಐದು ಜನ ಲಿಂಗಾಯತರನ್ನು ಸಚಿವರನ್ನಾಗಿ ಮಾಡಿದ್ದರು.ಆದರೆ, 2013ರಲ್ಲಿ ಕುರುಬ ಸಮುದಾಯದಿಂದ ನಾವು 13 ಮಂದಿ ಶಾಸಕರು ಆಯ್ಕೆಯಾಗಿದ್ದರೂ ಸಿದ್ದರಾಮಯ್ಯ ತಮ್ಮ ಐದು ವರ್ಷದ ಆಡಳಿತಾವಧಿಯಲ್ಲಿ ಒಬ್ಬರನ್ನೂ ಸಚಿವರನ್ನಾಗಿ ಮಾಡಿಲ್ಲ ಎಂದು ಸಿದ್ದರಾಮಯ್ಯ ವಿರುದ್ಧ ಎಂ ಟಿ ಬಿ ನಾಗರಾಜ್ ಅವರು ಕಿಡಿಕಾರಿದ್ದಾರೆ.
ಕುರುಬ ಸಮುದಾಯವನ್ನು ಪ್ರವರ್ಗ-1ಕ್ಕೆ ಸೇರಿಸಿದರೆ ಶೈಕ್ಷಣಿಕವಾಗಿ ಅನುಕೂಲವಾಗುತ್ತದೆ ಎಂದರೆ ಸೇರಿಸಿಲ್ಲ. ಉತ್ತರ ಕರ್ನಾಟಕ ಭಾಗದವರು ಕುರುಬರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿ ಎಂದು ಹೋರಾಟಗಳನ್ನು ಮಾಡಿದರು. ಅದನ್ನು ಶಿಫಾರಸ್ಸು ಮಾಡಿಲ್ಲ. ಕುರುಬ ಸಮುದಾಯಕ್ಕೆ ಸಿದ್ದರಾಮಯ್ಯ ಕೊಟ್ಟಿರುವ ಕೊಡುಗೆ ಏನು ಎಂಬುದನ್ನು ಹೇಳಲಿ ಎಂದು ಎಂಟಿಬಿ ನಾಗರಾಜ್ ಸವಾಲು ಹಾಕಿದರು.