ಉಪಚುನಾವಣೆಯ ಕಾವು ಸಿದ್ದವಾಗಿದ್ದು ಜೆಡಿಎಸ್ ರಾಜ್ಯಾಧ್ಯಕ್ಷರಾದ ಎಚ್.ಕೆ.ಕುಮಾರಸ್ವಾಮಿ ಅವರು ಉಪಚುನಾವಣೆಯ ಕ್ಷೇತ್ರವಾರು ಉಸ್ತುವಾರಿಗಳು ಹಾಗೂ ವೀಕ್ಷಕರನ್ನು ನೇಮಕ ಮಾಡಿ ಪಕ್ಷದ ಮುಖಂಡರಿಗೆ ಜವಾಬ್ದಾರಿ ಹಂಚಿಕೆ ಮಾಡಿದ್ದಾರೆ.
ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಪೈಕಿ 13 ವಿಧಾನಸಭಾ ಕ್ಷೇತ್ರಗಳಿಗೆ ವೀಕ್ಷಕರನ್ನು ನೇಮಕ ಮಾಡಲಾಗಿದೆ. ಹುಣಸೂರಿಗೆ ಮಾಜಿ ಸಚಿವ ಸಾ.ರಾ.ಮಹೇಶ್, ಸಂಸದ ಪ್ರಜ್ವಲ್ ರೇವಣ್ಣ, ಶಾಸಕರಾದ ಕೆ.ಮಹದೇವ್, ಅಶ್ವಿನ್‍ಕುಮಾರ್ ಕೆ.ಆರ್.ಪೇಟೆಗೆ ಮಾಜಿ ಸಚಿವರಾದ ಎಚ್.ಡಿ.ರೇವಣ್ಣ, ಬಿ.ಬಿ.ನಿಂಗಯ್ಯ, ರಾಜ್ಯ ಯುವ ಜನತಾದಳದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರನ್ನು ವೀಕ್ಷಕರನ್ನಾಗಿ ನೇಮಕ ಮಾಡಲಾಗಿದೆ ಇನ್ನು ಹೇಗೆ ಅವರವರ ಜವಬ್ದಾರಿಯನ್ನು ನಿರ್ವಹಿಸುತ್ತಾರೆ ನೊಡಬೇಕಿದೆ .