ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನಗೊಳ್ಳಲು ಪ್ರಮುಖ ಕಾರಣಕರ್ತರಾಗಿದ್ದ ರಮೇಶ್ ಜಾರಕಿಹೊಳಿ ಈಗ ಬಿಜೆಪಿ ಅಭ್ಯರ್ಥಿಯಾಗಿದ್ದು, ಅವರಿಗೆ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಸಹೋದರ ಲಖನ್ ಜಾರಕಿಹೊಳಿ ಸ್ಪರ್ಧೆ ನೀಡುತ್ತಿದ್ದಾರೆ. ಅವರನ್ನು ಸೋಲಿಸಲು ಮೈತ್ರಿಪಡೆ ಸಿದ್ದವಾಗಿದೆ.
ಇದರ ಮಧ್ಯೆ ನಡೆದಿರುವ ಮತ್ತೊಂದು ಮಹತ್ವದ ಬೆಳವಣಿಗೆಯಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ಅಶೋಕ್ ಪೂಜಾರಿ ಈಗ ಜೆಡಿಎಸ್ ನಿಂದ ಕಣಕ್ಕಿಳಿದಿದ್ದಾರೆ. ಅಶೋಕ್ ಪೂಜಾರಿ ನಾಮಪತ್ರ ಹಿಂಪಡೆಯುವಂತೆ ಮನವೊಲಿಸಲು ಮುಂದಾದ ಬಿಜೆಪಿ ನಾಯಕರು ವಿಫಲರಾಗಿದ್ದಾರೆ.ಎಂದು ಹೇಳಲಾಗುತ್ತಿದೆ ಒಟ್ಟಾರೆ ರಾಜಕೀಯ ವಲಯದಲ್ಲಿ ಉಪಚುನಾವಣೆಯ ಕಾವು ಹೆಚ್ಚಾಗಿದೆ.