17 ರಲ್ಲಿ 15 ಅನರ್ಹ ಶಾಸಕರ ಕ್ಷೇತ್ರಗಳಿಗೆ ಮಾತ್ರ ಬೈ ಎಲೆಕ್ಷನ್…! 2 ಕ್ಷೇತ್ರಗಳಿಗೆ ಯಾಕಿಲ್ಲ?

Date:

ರಾಜ್ಯದಲ್ಲೀಗ ಉಪಚುನಾವಣೆಯ ಕಾವು. ಮೈತ್ರಿ ಸರಕಾರದ ಪತನಕ್ಕೆ ಕಾರಣವಾದ 17 ಮಂದಿ ಅನರ್ಹ ಶಾಸಕರ ಕ್ಷೇತ್ರಗಳಿಗೆ ಬೈ ಎಲೆಕ್ಷನ್ ನಡೀತಾ ಇದೆ. ಅನರ್ಹತೆ ಹಣೆಪಟ್ಟಿ ಕಟ್ಟಿಕೊಂಡರೂ ಚುನಾವಣಾ ಅಖಾಡಕ್ಕೆ ಇಳಿಯಲು ಸುಪ್ರೀಂಕೋರ್ಟ್ನಿಂದ ಅನುಮತಿ ಪಡೆದಿರುವ ಅನರ್ಹರು ಮತ್ತೊಮ್ಮೆ ಅಗ್ನಿ ಪರೀಕ್ಷೆಗೆ ರೆಡಿಯಾಗಿದ್ದಾರೆ. ಒಂದಿಬ್ಬರನ್ನು ಹೊರತುಪಡಿಸಿ ಉಳಿದೆಲ್ಲಾ ಕಡೆಗಳಲ್ಲಿ ಬಿಜೆಪಿಯಿಂದ ಅನರ್ಹ ಶಾಸಕರು ಸ್ಪರ್ಧಿ ಸುತ್ತಿದ್ದಾರೆ.
ಚಿಕ್ಕಬಳ್ಳಾಪುರ
ಮಹಾಲಕ್ಷ್ಮಿ ಲೇಔಟ್
ಹೊಸಕೋಟೆ
ಹುಣಸೂರು
ಗೋಕಾಕ್
ಯಶವಂತಪುರ
ಅಥಣಿ
ಕಾಗವಾಡ
ಶಿವಾಜಿನಗರ
ಕೆ ಆರ್ ಪೇಟೆ
ಕೆಆರ್ ಪುರಂ
ಹೀರೇಕೇರೂರು
ರಾಣೆಬೆನ್ನೂರು
ವಿಜಯ ನಗರ
ಯಲ್ಲಾಪುರ
ಈ 15 ಕ್ಷೇತ್ರಗಳಿಗೆ ಉಪ ಚುನಾವಣೆ ನಡೀತಾ ಇದೆ. ಆದರೆ ಮಸ್ಕಿ ಮತ್ತು ಆರ್ ಆರ್ ನಗರ ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿಲ್ಲ.

ಆರ್ ಆರ್ ನಗರಕ್ಕೇಕಿಲ್ಲ ? : ರಾಜರಾಜೇಶ್ವರಿ ನಗರ ಚುನಾವಣೆಯಲ್ಲಿ ಕಾಂಗ್ರೆಸ್‌ನ ಮುನಿರತ್ನ ಅವರು ಗೆದ್ದಿದ್ದರು. ಆದರೆ ಚುನಾವಣೆ ಸಮಯದಲ್ಲಿ ಕ್ಷೇತ್ರದಲ್ಲಿ ನಕಲಿ ಮತದಾರರ ಪಟ್ಟಿ ಸಿಕ್ಕಿತ್ತು, ಈ ಬಗ್ಗೆ ಮುನಿರತ್ನ ವಿರುದ್ಧ ದೂರು ದಾಖಲಾಗಿತ್ತು. ಇತ್ತೀಚೆಗೆ ಮುನಿರತ್ನ ಹೆಸರು ಚಾರ್ಜ್‌ಶೀಟ್‌ನಿಂದ ಕೈಬಿಡಲಾಗಿತ್ತು. ಆದರೆ ಬಿಜೆಪಿಯ ತುಳಸಿ ಮುನಿರಾಜು ಗೌಡ ಮನವಿಯಂತೆ ಮುನಿರತ್ನ ವಿರುದ್ಧ ತನಿಖೆ ಜಾರಿಯಲ್ಲಿದೆ. ನಕಲಿ ಮತದಾರರ ಪಟ್ಟಿ ದೊರೆತ ಪ್ರಕರಣ ನ್ಯಾಯಾಲಯದಲ್ಲಿ ಇರುವ ಕಾರಣ ರಾಜರಾಜೇಶ್ವರಿ ನಗರ ಉಪಚುನಾವಣೆಗೆ ನ್ಯಾಯಾಲಯ ತಡೆ ನೀಡಿದೆ.

ಮಸ್ಕಿಯಲ್ಲೇಕೆ ಬೈ ಎಲೆಕ್ಷನ್ ನಡೀತಾ ಇಲ್ಲ? :
ಮಸ್ಕಿ ವಿಧಾನಸಭೆ ಕ್ಷೇತ್ರಕ್ಕೆ 2018 ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನ ಪ್ರತಾಪ್ ಗೌಡ ಪಾಟೀಲ್ ಅವರು ಕೇವಲ 213 ಮತಗಳ ಅಂತರದಿಂದ ಅಷ್ಟೆ ಗೆದ್ದಿದ್ದರು. ಬಿಜೆಪಿಯ ಪರಾಜಿತ ಅಭ್ಯರ್ಥಿ ಆರ್.ಬಸವರಾಜು ಅವರು ನ್ಯಾಯಾಲಯದ ಮೆಟ್ಟಿಲೇರಿ ಚುನಾವಣೆಯಲ್ಲಿ ಅಕ್ರಮ ಮತದಾನ ನಡೆದಿದೆ ಎಂದು ಆರೋಪ ಮಾಡಿದ್ದಾರೆ. ಈ ಪ್ರಕರಣದ ವಿಚಾರಣೆ ನಡೆಯುತ್ತಿರುವ ಕಾರಣ ಮಸ್ಕಿಯಲ್ಲಿ ಚುನಾವಣೆ ಘೋಷಿಸಿಲ್ಲ.
ಹೀಗಾಗಿ ಮಸ್ಕಿ ಮತ್ತು ಆರ್ ಆರ್ ನಗರ ಹೊರತುಪಡಿಸಿ ಉಳಿದ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯುತ್ತಿದೆ.

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...