ರಾಜ್ಯ ರಾಜಕಾರಣದಲ್ಲಿ ಉಪ ಚುನಾವಣೆ ಕಾವು ಜೋರಾಗಿದೆ ಹಾಗೂ ರಾಜ ರಾಜಕಾರಣಿಗಳು ಒಬ್ಬರ ಮೇಲೊಬ್ಬರು ಕೆಸರು ಎರಚಾಟ ವನ್ನು ಮಾಡಿಕೊಳ್ಳುತ್ತಿದ್ದಾರೆ ಇದೀಗ ವಿರೋಧ ಪಕ್ಷದ ನಾಯಕರಾಗಿರುವ ಸಿದ್ದರಾಮಯ್ಯ ಅವರು ಸದಾನಂದ ಗೌಡ ಅವರಿಗೆ ಲೇವಡಿ ಯನ್ನು ಮಾಡಿದ್ದಾರೆ ಏಕಾಂಗಿಯಾಗಿ ಹೋಗಿರುವ ಸದಾನಂದಗೌಡ ಅವರನ್ನು ಕರ್ನಾಟಕ ಬಿಜೆಪಿಯಲ್ಲಿ ಯಾರೂ ಗಂಭೀರವಾಗಿ ಸ್ವೀಕರಿಸುತ್ತಿಲ್ಲ.
ಇದಕ್ಕಾಗಿ ಅವರು ತಮ್ಮ ಜೋಕುಗಳಿಗೆ ತಾವೇ ನಕ್ಕು ರಾಜ್ಯದ ಜನರಿಗೆ ಮನರಂಜನೆ ನೀಡುತ್ತಿರುತ್ತಾರೆ ಎಂದು ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಹಾಗೂ ಉಪ ಚುನಾವಣೆಯಲ್ಲಿ ಯಾರಿಗೆ ಎಷ್ಟು ಸ್ಥಾನ ದೊರಕಲಿದೆ ಎಂಬ ಕುತೂಹಲ ಎಲ್ಲರಲ್ಲೂ ಮೂಡಿದೆ .
ಎಲ್ಲ ಪಕ್ಷದ ಅಭ್ಯರ್ಥಿಗಳು ಕೂಡ ಬಿರುಸಿನ ಮತಯಾಚನೆಯನ್ನು ಮಾಡುತ್ತಿದ್ದಾರೆ .