ರಾಜ್ಯದಲ್ಲಿ ಉಪ ಚುನಾವಣೆ ಕಾವು ಹೆಚ್ಚಾಗಿದೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕೂಡ ಪ್ರಚಾರ ಕಣಕ್ಕೆ ಇಳಿದಿದ್ದಾರೆ ಇಂದು ಅಥಣಿ, ಕಾಗವಾಡ ಹಾಗೂ ಗೋಕಾಕ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿ ಗೋಕಾಕ್‌ನಲ್ಲಿ ಏರ್ಪಡಿಸಿದ್ದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಲಿಂಗಾಯತ ಸಮುದಾಯದ ಮತದಾರರು ಯಾವುದೇ ವ್ಯಾಮೋಹಕ್ಕೆ ಬಲಿಯಾಗದೆ,
ನಮ್ಮ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಡಬೇಕು ಎಂದು ಕೋರಿದರು ಈ ವಿಚಾರದ ಬಗ್ಗೆ ಜಾತಿ ರಾಜಕಾರಣ ಮಾಡುತ್ತಿದ್ದಾರೆ ಮುಖ್ಯಮಂತ್ರಿ ಎಂಬ ಮಾತು ಕೂಡ ರಾಜಕೀಯ ವಲಯದಲ್ಲಿ ಕೇಳಿ ಬರ್ತಾ ಇತ್ತು ಹಾಗೂ ಉಪ ಚುನಾವಣೆಯಲ್ಲಿ ಎಲ್ಲ ಕ್ಷೇತ್ರದಲ್ಲೂ ಜಯ ಗಳಿಸುತ್ತೇವೆ ಎಂಬ ನಂಬಿಕೆ ನಮಗಿದೆ ಮುಂದಿನ ಮೂರೂವರೆ ವರ್ಷ ಕೂಡ ಬಿಜೆಪಿ ಅಧಿಕಾರದಲ್ಲಿ ಇರುತ್ತದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹೇಳಿದರು .