ರಾಜಕೀಯ ವಲಯದಲ್ಲಿ ಎಲ್ಲ ಪಕ್ಷಗಳಲ್ಲೂ ಉಪಚುನಾವಣೆಗೆ ಪ್ರಚಾರ ಭರ್ಜರಿಯಾಗಿ ನಡೆಯುತ್ತಿದೆ ಹಾಗೆ ಒಬ್ಬರ ಮೇಲೊಬ್ಬರು ಕೆಸರು ಎರಚಾಟ ವನ್ನು ಕೂಡ ಮಾಡಿಕೊಳ್ಳುತ್ತಿದ್ದಾರೆ ಇದೀಗ ಸಿದ್ದರಾಮಯ್ಯ ಅವರಿಗೆ ಸದಾನಂದ ಗೌಡ ಅವರು ನಾನು ಕುರಿ ಕಾದು ಬಂದವನು, ಸಮಾಜವಾದಿ ಹಿನ್ನೆಲೆಯುಳ್ಳವನು ಎಂದು ಸಿದ್ದರಾಮಯ್ಯ ಹೇಳಿಕೊಳ್ಳುತ್ತಾರೆ. ಐಷರಾಮಿ ಜೀವನ ನಡೆಸುವವರಿಗೆ ಸಮಾಜವಾದಿ ಸಿದ್ದಾಂತ ಬೇರೆ ಎಂದು ಟೀಕಿಸಿದ್ದಾರೆ.
ಅನೇಕ ಕ್ಷೇತ್ರಗಳಲ್ಲಿ ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲು ಕಾರ್ಯಕರ್ತರೇ ಸಿಗುತ್ತಿಲ್ಲ. ಹತಾಶರಾಗಿ ನಮ್ಮ ಪಕ್ಷದ ವಿರುದ್ದ ಮನಬಂದಂತೆ ಮಾತನಾಡುತ್ತಿದ್ದಾರೆ ಇದಕ್ಕೆ ಫಲಿತಾಂಶವೇ ಉತ್ತರ ಕೊಡಲಿದೆ ಎಂದು ವಾಗ್ದಾಳಿ ನಡೆಸಿದರು. 15ಕ್ಕೆ 15 ಕ್ಷೇತ್ರಗಳಲ್ಲೂ ಬಿಜೆಪಿ ಗೆದ್ದೇ ಗೆಲ್ಲುತ್ತದೆ. ಇದರಲ್ಲಿ ಅನುಮಾನವೇ ಇಲ್ಲ. ಫಲಿತಾಂಶದ ನಂತರ ನಮ್ಮ ಸರ್ಕಾರ ಭದ್ರವಾಗಿರುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.