ಯಡಿಯೂರಪ್ಪ ನವರು ಇಂದು ಕೆರೆ ಕೋಡಿ ಒಡೆದು ಹಾನಿಗೊಳಗಾಗಿದ್ದ ಪ್ರದೇಶಗಳಿಗೆ ಇಂದು ಭೇಟಿ ಮಾಡಿದರು, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಕಿಡಿಕಾರಿದರು. ಸದ್ಯದ ಮಾಹಿತಿ ಪ್ರಕಾರ ಭಾನುವಾರ ಹುಳಿಮಾವು ಕೆರೆ ಕೋಡಿ ಒಡೆದು 630 ಮನೆಗಳು ಹಾನಿಗೊಳಗಾಗಿವೆ. ಇದರಲ್ಲಿ 319 ಮನೆಗಳು ಭಾಗಶಃ ಹಾಳಾಗಿವೆ ಇದರಿಂದ ಮನೆ ಕಳೆದುಕೊಂಡು ಸಂತ್ರಸ್ತರಾಗಿರುವವರಿಗೆ ಸರ್ಕಾರದ ವತಿಯಿಂದ ಇಂದು ಸಂಜೆಯೊಳಗೆ ಅವರ ಖಾತೆಗೆ 50 ಸಾವಿರ ರೂ. ಪರಿಹಾರವನ್ನು ನೀಡಲಾಗುುತ್ತದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹೇಳಿದ್ದಾರೆ .
ಇದಕ್ಕೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಬೇಕೆಂದು ಯಡಿಯೂರಪ್ಪ ಅವರು ಹೇಳಿದ್ದಾರೆ . ಹಾಗು ಜನರಿದ್ದ ಜಾಗಕ್ಕೆ ಮುಖ್ಯಮಂತ್ರಿ ಭೇಟಿ ನೀಡಿ ಪರಿಹಾರವನ್ನು ಘೋಷಿಸಿದ್ದಾರೆ .