ಇತ್ತೀಚೆಗೆ ಚುನಾವಣಾ ಪ್ರಚಾರದ ವೇಳೆ ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ಅವರು ಯಡಿಯೂರಪ್ಪ ವಿರುದ್ಧ ಹೇಳಿಕೆಗಳನ್ನು ನೀಡಿದರೂ ಇದಕ್ಕೆ ಪ್ರತಿಕ್ರಿಯಿಸಿದ ಯಡಿಯೂರಪ್ಪ ಅವರು ಶಾಸಕರನ್ನು ಎಷ್ಟು ಹಣ ಕೊಟ್ಟು ಖರೀದಿ ಮಾಡಿದ್ದೇವೆ ಎಂಬುದನ್ನು ಸಿದ್ದರಾಮಯ್ಯ ಇಲ್ಲವೇ ಕುಮಾರಸ್ವಾಮಿ ಬಹಿರಂಗಪಡಿಸಬೇಕು. ಇಲ್ಲದಿದ್ದರೆ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಎಚ್ಚರಿಸಿದರು.
ಶಾಸಕರು ಸರ್ಕಾರದಲ್ಲಿ ತಮ್ಮ ಕ್ಷೇತ್ರದ ಕೆಲಸಗಳು ನಡೆಯುತ್ತಿಲ್ಲ ಅಲ್ಲದೆ ಸರ್ಕಾರದಲ್ಲಿ ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಿದ್ದಕ್ಕೆ ಬೇಸತ್ತು ರಾಜೀನಾಮೆ ನೀಡಿದ್ದಾಗಿ ಶಾಸಕರೇ ಹೇಳಿದ್ದಾರೆ. ಆದರೂ ಈ ಇಬ್ಬರೂ ನಾಯಕರು ಮನಬಂದಂತೆ ಮಾತನಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಕಾಂಗ್ರೆಸ್-ಜೆಡಿಎಸ್ ಏನೇ ಗೇಮ್ ಪ್ಲಾನ್ ಮಾಡಿದರು ಒಂದೇ ಒಂದು ಸ್ಥಾನವನ್ನು ಗೆಲ್ಲುವುದಿಲ್ಲ. ಎಲ್ಲಾ ಕ್ಷೇತ್ರಗಳಲ್ಲಿ ನಾವು ಗೆಲ್ಲುವುದು ನೂರಕ್ಕೆ ನೂರರಷ್ಟು ಶತಸಿದ್ದ ಎಂದು ಯಡಿಯೂರಪ್ಪ ಅವರು ಹೇಳಿದ್ದಾರೆ .