ಬಾಲಿವುಡ್ ನ ಹಿರಿಯ ನಟ ದಿಲೀಪ್ ಕುಮಾರ್ ಅಸ್ವಸ್ಥರಾಗಿದ್ದು, ಮುಂಬೈನ ಲೀಲಾವತಿ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದೆ. ತೀವ್ರ ನಿಗಾ ಘಟಕದಲ್ಲಿ ಇರಿಸಿ ದಿಲೀಪ್ ಕುಮಾರ್‌ಗೆ ಚಿಕಿತ್ಸೆ ನೀಡಲಾಗುತ್ತಿದೆ. ದಿಲೀಪ್ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ.
93 ವರ್ಷದ ದಿಲೀಪ್ ಕುಮಾರ್ ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು. ಉಸಿರಾಟದ ತೊಂದರೆ ಮತ್ತು ನ್ಯುಮೋನಿಯಾ ಕಂಡು ಬಂದ ಹಿನ್ನೆಲೆಯಲ್ಲಿ ಅವರನ್ನು ಶನಿವಾರ ಮುಂಜಾನೆ 2.30ರ ಸುಮಾರಿಗೆ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ದಿಲೀಪ್ ಕುಮಾರ್ ಅವರಿಗೆ ಸ್ವಲ್ಪ ಜ್ವರವಿದ್ದು, ಬಿಳಿ ರಕ್ತದ ಕಣಗಳ ಪ್ರಮಾಣ ಹೆಚ್ಚಾಗಿದೆ ಎಂದು ಲೀಲಾವತಿ ಆಸ್ಪತ್ರೆಯ ವೈದ್ಯ ಡಾ. ಜಲೀಲ್ ಪರ್ಕರ್ ತಿಳಿಸಿದ್ದಾರೆ.
ಹಿಂದಿ ಚಲನಚಿತ್ರ ರಂಗದ ಅಭಿನೇತೃ ದಿಲೀಪ್ ಕುಮಾರ್ ಅವರನ್ನು ತಮ್ಮ ಕಾಲದ ಅತಿ ಶ್ರೇಷ್ಠ ನಟರಲ್ಲಿ ಒಬ್ಬರೆಂದು ಪರಿಗಣಿಸಲಾಗಿತ್ತು. 1944ರಿಂದ 1996ರವರೆಗೆ ಸುಮಾರು 62 ಚಿತ್ರಗಳಲ್ಲಿ ಅಭಿನಯಿಸಿ ಜನಮಾನಸದಲ್ಲಿ ಶಾಶ್ವತ ಸ್ಥಾನ ಕಲ್ಪಿಸಿಕೊಂಡಿದ್ದಾರೆ. ಶೋಕಭರಿತ ಪ್ರಧಾನ ಭೂಮಿಕೆಗಳಲ್ಲಿ ಪ್ರಸಿದ್ಧರಾದ ಕಾರಣ ಅವರನ್ನು ದುರಂತ ನಾಯಕನೆಂದೂ ಕರೆಯುತ್ತಾರೆ.
ಹಲವು ಪ್ರಶಸ್ತಿಗಳನ್ನ ಪಡೆದಿರೋ ಇವರು ಭಾರತೀಯ ಚಲನಚಿತ್ರ ರಂಗದ ಸರ್ವೋಚ್ಚ ಪ್ರಶಸ್ತಿ ದಾದಾಸಾಹೇಬ್ ಪಾಲ್ಕೆ ಪ್ರಶಸ್ತಿ ಪುರಸ್ಕೃತರೂ ಹೌದು. ಭಾರತದ ರಾಜ್ಯಸಭೆಯ ಸದಸ್ಯರೂ ಆಗಿದ್ದ ದಿಲೀಪ್ ಕುಮಾರ್ ಮೃದು ಸ್ವಭಾವದ ವ್ಯಕ್ತಿ. ಅಪಾರ ಅಭಿಮಾನಿ ಬಳಗವನ್ನ ಹೊಂದಿರೋ ದಿಲೀಪ್ ಕುಮಾರ್ ಕುಮಾರ್ ಆದಷ್ಟು ಬೇಗ ಚೇತರಿಸಿಕೊಳ್ಳಲಿ ಅನ್ನೋದೆ ಅವ್ರ ಅಸಂಖ್ಯ ಅಭಿಮಾನಿಗಳ ಆಶಯ ಹಾರೈಕೆ.
- “ಶ್ರೀ”
POPULAR STORIES :
ಬ್ಲೂಫಿಲಂ ವೀಕ್ಷಿಸುವಾಗ ಅವಳ ವಯಸ್ಸು ಕೇವಲ ಒಂಬತ್ತು..! ಇದು ಹದಿನಾರರಲ್ಲಿ ಕನ್ಯತ್ವ ಕಳೆದುಕೊಂಡ ಸನ್ನಿಯ ಜೀವನಗಾಥೆ
9 ವರ್ಷ, 11 ಬಾರಿ ಫೇಲ್ ಆದರೂ ಛಲ ಬಿಡದ ಆಫೀಸ್ ಬಾಯ್ ಕೊನೆಗೂ ಪೈಲೆಟ್ ಆದ..!
ಅಂದು ಐಐಟಿಯಿಂದ ರಿಜೆಕ್ಟ್, ಇಂದು 50 ಕೋಟಿ ವಹಿವಾಟು ಮಾಡೋ ಕಂಪನಿಗೆ ಸಿಇಓ..!
ಎಲ್ಲಾದ್ರೂ ಹುಡುಗಿ ವಿದ್ಯುತ್ ಕಂಬ ಹತ್ತೋದು ನೋಡಿದಿರಾ…? #Video
ಆಶಿತಾ-ಶಕೀಲ್ ಲವ್ ಸ್ಟೋರಿ..! ಪ್ರೇಮಕ್ಕಿಲ್ಲ ಜಾತಿ-ಧರ್ಮ..!?
ಕತ್ರೀನಾ ಕೈಫ್ ರೇಟು ಹದಿನೈದು ಕೋಟಿ..!? ದೀಪಿಕಾ, ಕಂಗನಾ ಭಯಂಕರ್ ಕಾಸ್ಟ್ಲೀ..!?
ಅದು ತೇಜೋಮಹಲ್ ಅಲ್ಲ, ಶುದ್ಧ ತಾಜ್ ಮಹಲ್..! ತಾಜ್ ಮಹಲ್ ಬಗ್ಗೆ ಗೊತ್ತಿರದ ರಹಸ್ಯಗಳು..!