ಇನ್ನೆನು ಉಪಚುನಾವಣೆ ಬರುತ್ತಿದ್ದಂತೆ ಎಲ್ಲಾ ಕಡೆ ಪ್ರಚಾರದ ಅಬ್ಬರ ಜೊರಾಗಿದೆ ಇದೇ ಸಂದರ್ಭದಲ್ಲಿ ಎಂ.ವೀರಪ್ಪ ಮೊಯ್ಲಿ ಅವರು ಬಿಜೆಪಿ ಅಗತ್ಯ ಬಹುಮತಕ್ಕೆ ಬೇಕಾದ ಶಾಸಕರನ್ನು ಗೆಲ್ಲಿಸಿಕೊಳ್ಳಲಾಗದೆ ಸಿಎಂ ಯಡಿಯೂರಪ್ಪ ಅವರು ರಾಜೀನಾಮೆ ಕೊಡಬೇಕಾದ ಸಂದರ್ಭ ನಿರ್ಮಾಣವಾಗಲಿದೆ ಎಂದರು.
ಮಹಾರಾಷ್ಟ್ರ ರಾಜ್ಯದಲ್ಲಿ ಸರಕಾರ ರಚನೆಗೆ ಅಗತ್ಯ ಬಹುಮತವಿಲ್ಲದಿದ್ದರೂ ಬಿಜೆಪಿ ಅಧಿಕಾರದಾಸೆಗಾಗಿ ಮುಖ್ಯಮಂತ್ರಿ ಸ್ಥಾನಪಡೆದು ಮತ್ತೆ ಒಂದೇ ದಿನದಲ್ಲಿ ರಾಜೀನಾಮೆ ನೀಡಿ ನಗೆಪಾಟಲಿಗೆ ಗುರಿಯಾಗಿದೆ. ರಾಜ್ಯದಲ್ಲೂ ಮಹಾರಾಷ್ಟ್ರದ ಪರಿಸ್ಥಿತಿಯೇ ನಿರ್ಮಾಣವಾಗಲಿದೆ ಎಂದು ಎಂ.ವೀರಪ್ಪ ಮೊಯ್ಲಿ ಭವಿಷ್ಯ ನುಡಿದಿದ್ದಾರೆ