ಉಪಚುನಾವಣೆಯ ಪ್ರಚಾರದ ಮೇಳೆ ಒಬ್ಬರಮೇಲೊಬ್ಬರು ಕೆಸರೆರಚಾಟ ಮಾಡಿಕೊಳ್ಳುತ್ತಿದ್ದಾರೆ ಇದೀಗ ಶರತ್ ಬಚ್ಚೇಗೌಡ ಬಿಜೆಪಿಯ ‘ಬಿ ಟೀಮ್’ ಇದ್ದ ಹಾಗೆ, ಅವರು ಚುನಾವಣೆಯಲ್ಲಿ ಗೆದ್ದರೂ ಬಿಜೆಪಿಗೇ ಹೋಗುತ್ತಾರೆ. ಆದುದರಿಂದ, ಅಲ್ಪಸಂಖ್ಯಾತರು ಯಾವುದೇ ಕಾರಣಕ್ಕೂ ಬಿಜೆಪಿ ಅಭ್ಯರ್ಥಿ ಹಾಗೂ ಪಕ್ಷೇತರ ಅಭ್ಯರ್ಥಿಗೆ ಮತ ನೀಡುವುದಿಲ್ಲ ಎಂದು ಝಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.
ಎಂಟಿಬಿ ನಾಗರಾಜ್ ಪಕ್ಷಕ್ಕೆ ದ್ರೋಹ ಮಾಡಿ ಹೋಗುತ್ತಾರೆ ಎಂದು ಮೊದಲೇ ಗೊತ್ತಿದ್ದರೆ, ಖಂಡಿತವಾಗಿಯೂ ನಾನು ಅವರ ಪರವಾಗಿ ಚುನಾವಣಾ ಪ್ರಚಾರ ಮಾಡುತ್ತಿರಲಿಲ್ಲ. ಈ ರೀತಿ ಉಪ ಚುನಾವಣೆ ಬರುತ್ತದೆ ಎಂದು ಯಾರೂ ನಿರೀಕ್ಷಿಸಿರಲಿಲ್ಲ. ಎಂಟಿಬಿ ನಾಗರಾಜ್‌ಗೆ ಮತದಾರರು ತಕ್ಕ ಪಾಠ ಕಲಿಸುತ್ತಾರೆ. ಪದ್ಮಾವತಿ ಸುರೇಶ್ ಅವರನ್ನು ಹೆಚ್ಚಿನ ಮತಗಳಿಂದ ಗೆಲ್ಲಿಸುತ್ತಾರೆ ಎಂದು ಝಮೀರ್ ಅಹ್ಮದ್ ಖಾನ್ ಅವರು ವಿಶ್ವಾಸ ವ್ಯಕ್ತಪಡಿಸಿದರು.