ರಾಧಿಕಾ ಕುಮಾರಸ್ವಾಮಿ ಅವರು ಮುಖ್ಯಭೂಮಿಕೆಯಲ್ಲಿ ನಟಿಸಿರುವ ದಮಯಂತಿ ಚಿತ್ರ ರಾಜ್ಯಾದ್ಯಂತ ಪ್ರೇಕ್ಷಕರ ಮನಗೆದ್ದಿದೆ ಈ ಚಿತ್ರವನ್ನು ನವರಸನ್ ನಿರ್ಮಿಸಿ ನಿರ್ದೇಶನ ಮಾಡಿದ್ದಾರೆ. ಈ ಚಿತ್ರ ಐದು ಭಾಷೆಗಳಲ್ಲಿ ಸಿದ್ಧವಾಗಿದೆ. ಈ ಚಿತ್ರವು ಹಾರರ್, ಥ್ರಿಲ್ಲರ್ ಹಾಗೂ ಕಾಮಿಡಿ ಕಥಾಹಂದರ ಹೊಂದಿದ್ದು, ಪ್ರೇಕ್ಷಕರ ನಾಡಿಮಿಡಿತವನ್ನು ಅರ್ಥ ಮಾಡಿಕೊಂಡು ಪರದೆ ಮೇಲೆ ಬರುತ್ತಿದ್ದು, ಈ ಚಿತ್ರಕ್ಕೆ ಆರ್.ಎಸ್.ಗಣೇಶ್ ನಾರಾಯಣ್ ಸಂಗೀತ ನೀಡಿದ್ದಾರೆ. ರಾಜ್ಯಾದ್ಯಂತ ಸುಮಾರು 250ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಅದ್ಧೂರಿಯಾಗಿ ಪ್ರದರ್ಶನ ಕೊಡುತ್ತಿದೆ .
ರಾಧಿಕಾ ಕುಮಾರಸ್ವಾಮಿ ಅವರು ಮುಖ್ಯಭೂಮಿಕೆಯಲ್ಲಿ ನಟಿಸಿದೆ ತುಂಬಾ ವರ್ಷಗಳಾಗಿದ್ದು ಅವರ ಅಭಿಮಾನಿಗಳಿಗೆ ಈ ಚಿತ್ರ ಮನಮುಟ್ಟಿದೆ ರಾಧಿಕಾ ಕುಮಾರಸ್ವಾಮಿ ಅವರು ಪಾತ್ರಕ್ಕೆ ಜೀವ ತುಂಬಿದ್ದಾರೆ ಎಂದು ಅಭಿಮಾನಿಗಳು ಹಾಗೂ ಚಿತ್ರ ವಿಮರ್ಶಕರು ಹೇಳುತ್ತಿದ್ದಾರೆ .