ನಾಳೆ ಚುನಾವಣಾ ಫಲಿತಾಂಶ ಇರುವುದರಿಂದ ಎಲ್ಲಾ ಅಭ್ಯರ್ಥಿಗಳು ಫಲಿತಾಂಶದ ಬಗ್ಗೆ ಕುತೂಹಲದಿಂದ ಕಾಯುತ್ತಿದ್ದರೆ ಆದರೆ ಇದೀಗ ಸಿದ್ದರಾಮಯ್ಯ ಅವರು ಉಪ ಚುನಾವಣೆಯ ಫಲಿತಾಂಶದ ಬಗ್ಗೆ ಮುನ್ನವೇ ಸಮೀಕ್ಷೆಗಳ ರೀತಿಯಲ್ಲಿ ಫಲಿತಾಂಶ ಬರಲು ಸಾಧ್ಯವಿಲ್ಲ. ಅನೇಕ ರಾಜ್ಯಗಳಲ್ಲಿ ಸಮೀಕ್ಷೆ ಏನಾಗಿದೆ ಎಂಬುದು ಗೊತ್ತೇ ಇದೆ. ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನಗಳಲ್ಲಿ ಜಯಗಳಿಸಲಿದೆ ಎಂದು ಸಿದ್ದರಾಮಯ್ಯ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಹಾಗೂ ಜೆಡಿಎಸ್ ಕಾಂಗ್ರೆಸ್ ಒಳ ಒಪ್ಪಂದ ಮಾಡಿಕೊಂಡು ಈ ಚುನಾವಣೆಯಲ್ಲಿ ಗೆಲ್ಲಲೇಬೇಕೆಂದು ನಿರ್ಧರಿಸಿದೆ ಎಂದು ಮಾಹಿತಿ ಇದೆ . ಅದಕ್ಕೆ ಸಿದ್ದರಾಮಯ್ಯ ಅವರು ಇಷ್ಟು ಗ್ಯಾರಂಟಿಯಾಗಿ ಗೆದ್ದೇ ಗೆಲ್ಲುತ್ತೇವೆ ಎಂದು ಹೇಳಿದ್ದಾರೆ ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಉಳಿಯುತ್ತ ಇಲ್ವಾ ಎಂಬ ಪ್ರಶ್ನೆ ಕೂಡ ರಾಜಕೀಯ ವಲಯದಲ್ಲಿ ಹರಿದಾಡ್ತಿದೆ .