ಹಿರೇಕೆರೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದ ಅನರ್ಹ ಶಾಸಕ ಬಿಸಿ ಪಾಟೀಲ್ ಭರ್ಜರಿ ಗೆಲುವಿನತ್ತ ಸಾಗುತ್ತಿದ್ದಾರೆ. 15,300 ಮತಗಳಿಂದ ಮುನ್ನಡೆಯನ್ನು ಸಾಧಿಸಿದ್ದರೇ, ಶಿರಸಿಯ ಯಲ್ಲಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಿವರಾಂ ಹೆಬ್ಬಾರ್ ಕೂಡ 27,061 ಮತಗಳ ಮುನ್ನಡೆಯಲ್ಲಿ ಮುನ್ನುಗ್ಗುತ್ತಿದ್ದಾರೆ.ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಆರ್.ನಾರಾಯಣಗೌಡ ಜಯಗಳಿಸುವ ಮೂಲಕ ಜೆಡಿಎಸ್ ಭದ್ರಕೋಟೆಯನ್ನು ಬೇಧಿಸಿ ಬಿಜೆಪಿ ಖಾತೆಯನ್ನು ಮಂಡ್ಯದಲ್ಲಿ ಪ್ರತಿಷ್ಠಾಪಿಸಿದ್ದಾರೆ. ಇತ್ತ ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿ ಡಾ.ಸುಧಾಕರ್ ಅವರು ಕೂಡ ಭರ್ಜರಿ ಗೆಲುವು ಪಡೆದುಕೊಂಡಿದ್ದಾರೆ ರಾಜ್ಯದಲ್ಲಿ ಬಿಜೆಪಿ ಮತ್ತೆ ಸರ್ಕಾರ ಮುಂದುವರಿಸುತ್ತದೆ ಎಂಬ ಸೂಚನೆಗಳು ಕಂಡು ಬರ್ತಾ ಇದೆ . ಇನ್ನು ಉಳಿದ ಎಲ್ಲ ಕ್ಷೇತ್ರದಲ್ಲಿ ಏನಾಗುತ್ತದೆ ಎಂದು ಕಾದು ನೋಡಬೇಕಿದೆ .
ಬಿಜೆಪಿ ಅಭ್ಯರ್ಥಿಗಳ ಗೆಲುವು ಸಂಭ್ರಮಾಚರಣೆಯಲ್ಲಿ ಕಾರ್ಯಕರ್ತರು .
Date: