ನಿನ್ನೆ ಉಪಚುನಾವಣೆಯ ಫಲಿತಾಂಶ ಹೊರಬರುತ್ತಿದ್ದಂತೆ ಎಲ್ಲರ ಗಮನ ಯಾರಿಗೆ ಯಾವ ಮಂತ್ರಿ ಸ್ಥಾನ ದೊರಕಲಿದೆ ಎಂದು ಇದ್ದಕ್ಕೆ ಪ್ರತಿಕ್ರಿಯೆ ನೀಡಿದ ಯಡಿಯೂರಪ್ಪ ಅವರು ವಿಧಾನಸಭಾ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಿಜೆಪಿಯ ಎಲ್ಲ ಶಾಸಕರನ್ನು ಮಂತ್ರಿ ಮಾಡಲಾಗುವುದು. ಈಗಾಗಲೇ ನೀಡಿದ್ದ ಭರವಸೆಯನ್ನು ಈಡೇರಿಸಲಾಗುವುದು. ಎಲ್ಲರೂ ಮಂತ್ರಿ ಆಗುತ್ತಾರೆ. ಈ ಬಗ್ಗೆ ಸಂದೇಹ ಬೇಡ. ಅವರು ರಾಜೀನಾಮೆ ನೀಡಿದ್ದರಿಂದಲೇ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಿದೆ ಎಂದು ತಿಳಿಸಿದರು.
ನಂತರ ಸೋತ ಅನರ್ಹರ ಪರಿಸ್ಥಿತಿ ಬಗ್ಗೆ ಕೇಳಿದಾಗ ಸಿಎಂ ಯಡಿಯೂರಪ್ಪ ಅವರು ಉಪಚುನಾವಣೆಯಲ್ಲಿ ಸೋತಿರುವ ಅನರ್ಹ ಶಾಸಕರಿಗೆ ಸ್ಥಾನಮಾನ ನೀಡುವ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ ಎಂದು ಹೇಳಿದ್ದಾರೆ ಹಾಗು ಒಂದೆರಡು ದಿನದಲ್ಲಿ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಹೇಳಿದ್ದಾರೆ.