ಡಿಸೆಂಬರ್ 5ರಂದು 15 ಕ್ಷೇತ್ರಗಳಿಗೆ ಉಪ ಚುನಾವಣೆ ನಡೆದಿದ್ದು, ಫಲಿತಾಂಶ ನಿನ್ನೆ ಹೊರಬಿದ್ದಿದೆ ಅದರಲ್ಲಿ. ಕಾಗವಾಡ ಕ್ಷೇತ್ರದ ಶ್ರೀಮಂತ್ ಪಾಟೀಲ್ ಪರ ಮತದಾರರು ತೀರ್ಪು ನೀಡಿದ್ದಾರೆ. ಕಾಂಗ್ರೆಸ್‌ನ ರಾಜು ಕಾಗೆ ಮತ್ತು ಜೆಡಿಎಸ್‌ನ ಶ್ರೀಶೈಲ ತುಗಶೆಟ್ಟಿ ವಿರುದ್ಧ ಶ್ರೀಮಂತ್ ಪಾಟೀಲ್ ಗೆಲುವು ಸಾಧಿಸಿದ್ದಾರೆ. ಅದರೆ ಅವರು ಅನಾರೋಗ್ಯದಿಂದ ಅವರನ್ನು ಮಹಾರಾಷ್ಟ್ರದ ಸಾಂಗ್ಲಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ಮುಂದುವರಿದಿದ್ದು,
ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಶ್ರೀಮಂತ್ ಪಾಟೀಲ್ ಅವರ ಪುತ್ರ ಶ್ರೀನಿವಾಸ್ ಪಾಟೀಲ್ ತಿಳಿಸಿದ್ದಾರೆ. ಕೆಲವು ತಿಂಗಳ ಹಿಂದೆ ಹೆಚ್ಚಿನ ಪ್ರದೇಶಗಳಲ್ಲಿ ಡೆಂಘೀ ಜ್ವರ ಸಾಮಾನ್ಯವಾಗಿತ್ತು. ಮುಂಜಾಗೃತಾ ಕ್ರಮಗಳನ್ನೂ ಕೈಗೊಳ್ಳಲಾಗಿತ್ತು.