ಉಪಚುನಾವಣೆ ಯಲ್ಲಿ ಬಿಜೆಪಿಗೆ ಜನತೆ ತಕ್ಕ ಪಾಠ ಕಲಿಸಲಿದ್ದಾರೆಂದು ಹೇಳಿದ್ದ ಸಿದ್ದರಾಮಯ್ಯರ ಭವಿಷ್ಯ ಫಲಿತಾಂಶದ ಬಳಿಕ ಸುಳ್ಳಾಗಿದೆ . ಜನತೆ ಯಾರಿಗೆ ತಕ್ಕ ಪಾಠ ಕಲಿಸಿದ್ದಾರೆಂದು ನಾಡಿಗೆ ಗೊತ್ತಾಗಿದೆ ಎಂದು ಆರ್ ಅಶೋಕ್ ಹೇಳಿದ್ದಾರೆ
ಸಿದ್ದರಾಮಯ್ಯ ವಿರೋಧ ಪಕ್ಷದಲ್ಲಿಯೇ ಮುಂದುವರಿಯಬೇಕು. ಅವರು ಯಾವುದೇ ಪಕ್ಷಕ್ಕೆ ಹೋದರೂ ಪಕ್ಷವನ್ನು ಇಬ್ಭಾಗ ಮಾಡುವುದರಲ್ಲಿಯೇ ಇರುತ್ತಾರೆ. ಈಗಾಗಲೇ ಕಾಂಗ್ರೆಸ್ಸನ್ನು ಮೂರು ಭಾಗವಾಗಿ ಮಾಡಿ, ನಮಗೆ ಅನುಕೂಲ ಮಾಡಿಕೊಟ್ಟಿದ್ದಾರೆ ಹಾಗೂ ಫಲಿತಾಂಶದ ಬಳಿಕ ಅವರು ಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಅವರು ಯಾವ ಪಕ್ಷಕ್ಕೆ ಹೋದರೂ ಪಕ್ಷ ಎರಡು ಭಾಗವಾಗುವುದು ಕಂಡಿತ ಜನರು ತಕ್ಕ ಪಾಠ ಕಾಂಗ್ರೆಸ್ ಹಾಗೂ ಜೆಡಿಎಸ್ ಗೆ ಕಲಿಸಿದೆ ಎಂದು ಆರ್ ಅಶೋಕ್ ಅವರು ಹೇಳಿದ್ದಾರೆ.