ದೇಶಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿ ವ್ಯಾಪಕ ಪ್ರತಿಭಟನೆಗೆ ಕಾರಣವಾಗಿರುವ ಕೇಂದ್ರ ಎನ್‍ಡಿಎ ಸರ್ಕಾರದ ಮಹತ್ವಾಕಾಂಕ್ಷಿ ಪೌರತ್ವ(ತಿದ್ದುಪಡಿ)ಮಸೂದೆಯನ್ನು ಇಂದು ರ ಮಂಡಿಸಲಾಯಿತು. ಪ್ರತಿಪಕ್ಷಗಳು ಸರ್ಕಾರದ ಕ್ರಮವನ್ನು ತೀವ್ರವಾಗಿ ವಿರೋಧಿಸಿ ಪ್ರತಿಭಟಿಸಿದರೆ ಅಮಿತ್ ಶಾ ಅವರು ಈ ಮಸೂದೆಯನ್ನು ಬಲವಾಗಿ ಸಮರ್ಥಿಸಿಕೊಂಡರು ಈ ಮಸೂದೆಯಿಂದ ಬಾರದೆ ಇರುವ ಮುಸ್ಲಿಮರು ಯಾವುದೇ ಗೊಂದಲ ಮತ್ತು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಭಾರತೀಯ ಮುಸ್ಲಿಮರು ಇಂದಿಗೂ, ಎಂದೆಂದಿಗೂ ಭಾರತೀಯ ಪೌರರೇ ಎಂದು ಸ್ಪಷ್ಟ ಮಾತುಗಳಲ್ಲಿ ಹೇಳಿದರು.
ಪಾಕಿಸ್ತಾನ , ಬಾಂಗ್ಲಾದೇಶ ಮತ್ತು ಆಫ್ಘಾನಿಸ್ತಾನ ದೇಶಗಳಲ್ಲಿ ಧಾರ್ಮಿಕ ಕಿರುಕುಳದಿಂದ ಬೇಸತ್ತು ಇಲ್ಲಿಗೆ ಬಂದಿರುವ ಮುಸ್ಲಿಮೇತರರಿಗೆ ಮಾತ್ರ ಭಾರತೀಯ ಪೌರತ್ವ ನೀಡಲಾಗುತ್ತದೆ ಎಂದರು ಈ ವಿಚಾರದ ಸಂಬಂಧಿಸಿದಂತೆ ಬಿಜೆಪಿ ಕಚೇರಿ ಮುಂದೆ ಕಾಂಗ್ರೆಸ್ ಬೆಂಬಲಿಗರು ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ.