ಡಿಕೆ ಶಿವಕುಮಾರ್ ಇಡಿ ವಿಚಾರಣೆ ನಡೆಸಿ ಕೆಲ ದಿನಗಳ ಕಾಲ ಜೈಲು ವಾಸವನ್ನು ಅನುಭವಿಸುವಂಥ ಸ್ಥಿತಿ ಬಂದಿತ್ತು ಇದೀಗ ಇಂದು ಅವರ ವಿಚಾರಣೆ ಇತ್ತು ಅವರ ಜೊತೆಗೆ ಪ್ರಕರಣದಲ್ಲಿ ಭಾಗಿಯಾಗಿದ್ದ ಸ್ನೇಹಿತರು ವಿಚಾರಣೆಗೆ ಹಾಜರಾಗಿದ್ದರು. ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಇತರರ ವಿರುದ್ಧ ಐಟಿ ಅಧಿಕಾರಿಗಳು ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಿರುವ ಹಿನ್ನೆಲೆಯಲ್ಲಿ ಕೋರ್ಟ್ ಸಾಕ್ಷಿಗಳ ವಿಚಾರಣೆ ನಡೆಸಿತು.ಮಾಜಿ ಸಚಿವ ಡಿ.ಕೆ.ಶಿವಕುಮಾರ್
ಹಾಗೂ ಇತರರ ವಿಚಾರಣೆಗೆ ಒಂದು ತಿಂಗಳು ವಿನಾಯಿತಿ ಕೊಡಬೇಕು ಎಂದು ವಕೀಲರು ನ್ಯಾಯಾಧೀಶರ ಮುಂದೆ ಮನವಿ ಮಾಡಿದರು ಅದಕ್ಕೆ ಆಕ್ರೋಶಗೊಂಡ ನ್ಯಾಯಾಧೀಶರು ಇಷ್ಟೊಂದು ಅವಕಾಶ ಏಕೆ ಬೇಕು ಎಂದು ಪ್ರಶ್ನಿಸಿದ್ದಾರೆ ಎಂದು ಹೇಳಲಾಗುತ್ತಿದೆ . ಇದೇ ಪ್ರಕರಣಕ್ಕೆ ಸಂಬಂಧಿಸಿ ಸುಪ್ರೀಂಕೋರ್ಟ್‌ನಲ್ಲಿ ಮುಂದಿನ ವಾರ ವಿಚಾರಣೆ ಇದೆ. ಹೀಗಾಗಿ ವಿನಾಯಿತಿ ಬೇಕು ಎಂದು ಡಿಕೆ ಶಿವಕುಮಾರ್ ಮನವಿ ಮಾಡಿದ್ದಾರೆ .