ಉಪ ಚುನಾವಣೆಯ ಫಲಿತಾಂಶದಲ್ಲಿ ಅಚ್ಚರಿಯ ಫಲಿತಾಂಶವೆಂದರೆ ಹೊಸಕೋಟೆ ಕ್ಷೇತ್ರದ ಚುನಾವಣಾ ಫಲಿತಾಂಶ ಏಕೆಂದರೆ ಅಲ್ಲಿ ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ ಅವರು ಗೆಲುವು ಸಾಧಿಸಿದ್ದರು ತನ್ನ ತಂದೆ ಬೇರೆ ಪಕ್ಷದಲ್ಲಿದ್ದರೂ ಕೂಡ ತಾನು ಪಕ್ಷೇತರ ಅಭ್ಯರ್ಥಿಯಾಗಿ ಹೊಸಕೋಟೆ ಕ್ಷೇತ್ರದಲ್ಲಿ ಚುನಾವಣೆಗಿಳಿದಿದ್ದಾರೆ ಕೈ ಹಿಡಿದಿದ್ದಾರೆ . ಬಚ್ಚೇಗೌಡರು ಚುನಾವಣೆ ಸಂದರ್ಭದಲ್ಲಿ ಒಮ್ಮೆಯೂ ನನ್ನ ಪರವಾಗಿ ಪ್ರಚಾರ ಮಾಡಿಲ್ಲ. ಯಾವುದೇ ರೀತಿಯಲ್ಲಿ ಪಕ್ಷ ವಿರೋಧಿ ಚಟುವಟಿಕೆಗಳನ್ನು ನಡೆಸಿಲ್ಲ ಎಂದು ಶರತ್ ಬಚ್ಚೇಗೌಡ ಅವರು ಹೇಳಿದ್ದಾರೆ .

ಹೊಸಕೋಟೆ ಕ್ಷೇತ್ರದ ಮತದಾರರು ಅನರ್ಹ ಶಾಸಕರನ್ನು ಸೋಲಿಸುವ ಮೂಲಕ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿ ಹಿಡಿದಿದ್ದಾರೆ.ರಾಷ್ಟ್ರೀಯ ಪಕ್ಷಗಳ ಅಭ್ಯರ್ಥಿಗಳನ್ನು ತಿರಸ್ಕರಿಸಿ, ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ನನ್ನನ್ನು ಕ್ಷೇತ್ರದ ಹಿತ ಹಾಗೂ ಅಭಿವೃದ್ಧಿಗಾಗಿ 11 ಸಾವಿರ ಮತಗಳ ಅಂತರದಿಂದ ಗೆಲ್ಲಿಸಿದ್ದಾರೆ ಎಂದು ಶರತ್ ಬಚ್ಚೇಗೌಡ ಹೇಳಿದರು.






