ರಾಜ್ಯದಲ್ಲಿ ಉಪ ಚುನಾವಣೆ ನಡೆದಾಗ ಯಶವಂತಪುರ ಕ್ಷೇತ್ರದಲ್ಲಿ ಜಿದ್ದಾ ಸುದ್ದಿಯಾಗಿ ಕಣಕ್ಕಿಳಿದಿದ್ದ ಅಭ್ಯರ್ಥಿಗಳಲ್ಲಿ ಎಸ್ ಟಿ ಸೋಮಶೇಖರ್ ಅವರು ಜಯಗಳಿಸಿದರು ಅವರು ಈ ಹಿಂದೆ ಕಾಂಗ್ರೆಸ್ನಲ್ಲಿದ್ದು ನಂತರ ಈಗ ಬಿಜೆಪಿಗೆ ಸೇರಿ ಉಪಚುನಾವಣೆಯಲ್ಲಿ ಕಣಕ್ಕಿಳಿದಿದ್ದರು ಸೋಮಶೇಖರ್ ಅವರು ಇಂದು ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದವನ್ನು ಪಡೆದರು ನಂತರ ಮಾತನಾಡಿದ ಅವರು ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ತ್ಯಾಗ ಮಾಡಿರುವವರನ್ನು ಕೈಬಿಡದಂತೆ ಬಿಎಸ್‍ವೈ ಅವರಲ್ಲಿ ಮನವಿ ಮಾಡಿದ್ದು, ಪಕ್ಷದ ವರಿಷ್ಠರೊಂದಿಗೆ ಚರ್ಚಿಸುವುದಾಗಿ ಸಿಎಂ ಭರವಸೆ ನೀಡಿದ್ದಾರೆ ಎಂದರು.

ಸುಪ್ರೀಂಕೋರ್ಟ್ ಆದೇಶದಂತೆ ಸೋತಿರುವವರು ಚುನಾವಣೆಯಲ್ಲಿ ಗೆಲ್ಲಬೇಕೆಂಬ ಅನಿವಾರ್ಯತೆ ಇರುವುದರಿಂದ, ಸೋತಿರುವವರನ್ನು ವಿಧಾನಪರಿಷತ್‍ಗೆ ಆಯ್ಕೆ ಮಾಡುವ ಬಗ್ಗೆ ವರಿಷ್ಠರೊಂದಿಗೆ ಮಾತನಾಡುವುದಾಗಿ ಬಿಎಸ್‍ವೈ ತಿಳಿಸಿದ್ದಾರೆ ಎಂದರು.






