ಉಪಚುನಾವಣೆಯಲ್ಲಿ ಗೆದ್ದ ಬಿಜೆಪಿಯ 12 ಶಾಸಕರ ಪೈಕಿ 11 ಮಂದಿಗೆ ಸಚಿವ ಸ್ಥಾನ ನೀಡುವುದು ಬಹುತೇಕ ಖಚಿತವಾಗಿದೆ. ಈ ಸಂಬಂಧ ಮುಂದಿನ ವಾರ ದೆಹಲಿಗೆ ತೆರಳುತ್ತಿರುವ ಯಡಿಯೂರಪ್ಪ ಅವರಿಗೆ ಸಚಿವ ಸ್ಥಾನದ ಆಕಾಂಕ್ಷಿಗಳು ಬೇಡಿಕೆ ಇಟ್ಟಿದ್ದಾರೆ ಎನ್ನಲಾಗುತ್ತಿದೆ , ಈ 11 ಶಾಸಕರಿಗೆ ಸಚಿವ ಸ್ಥಾನ ಹಾಗೂ ಇನ್ನೂ ಎರಡು ಡಿಸಿಎಂ ಹುದ್ದೆ ಸೃಷ್ಟಿಸಲು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರಿಂದ ಅನುಮತಿ ಪಡೆಯುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ ಆದರೆ ಇದಕ್ಕೆ ಕೇಂದ್ರ ಸರ್ಕಾರ ಎನು ಹೇಳಿತ್ತದೆ ಎಂದು ಕಾದು ನೊಡಬೇಕಿದೆ.

ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಕಾರಣರಾಗಿದ್ದ ಬೆಳಗಾವಿ ಸಾಹುಕಾರ ರಮೇಶ್ ಜಾರಕಿಹೊಳಿ ಅವರಿಗೆ ಉಡುಗೊರೆಯ ರೂಪದಲ್ಲಿ ಜಲಸಂಪನ್ಮೂಲ ಖಾತೆಯ ಜೊತೆಗೆ ಉಪಮುಖ್ಯಮಂತ್ರಿ ಖಾತೆ ನೀಡಲಾಗುವುದು ಎಂಬ ಮಾತುಗಳು ಹಿಂದಿನಿಂದಲೂ ಕೇಳಿಬರುತ್ತಿತ್ತು ಆದರೆ ಯಡಿಯೂರಪ್ಪ ಅವರಿಗೆ ಇದನ್ನು ಮಾಡಲು ಕೇಂದ್ರದ ಅನುಮತಿ ಪಡೆಯಲು ದೆಹಲಿಗೆ ತೆರಳುತ್ತಿದ್ದಾರೆ . ಈ ಕುರಿತು ಮಾತುಕತೆ ಈಗಲೂ ನಡೆಯುತ್ತಿದೆ. ರಮೇಶ್ ಜಾರಕಿಹೊಳಿ ಉಪಮುಖ್ಯಮಂತ್ರಿ ಸ್ಥಾನಕ್ಕಾಗಿ ಪಟ್ಟುಹಿಡಿದು ಕುಳಿತಿದ್ದಾರೆ ಎಂದು ಹೇಳಲಾಗುತ್ತಿದೆ. ಯಾರಿಗೆ ಯಾವ ಸ್ಥಾನ ನೋಡಬೇಕಿದೆ.






