ಉಪಚುನಾವಣೆಯ ಫಲಿತಾಂಶ ಬಂದ ನಂತರ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದರು ಆದರೆ ಕಾಂಗ್ರೆಸ್ ಹೈಕಮಾಂಡ್ ಅವರನ್ನು ಅದೇ ಹುದ್ದೆಯಲ್ಲಿ ಮುಂದುವರೆಯುವಂತೆ ಮನವೊಲಿಸಲಾಗುತ್ತದೆ ಎಂದು ಹೇಳಲಾಗಿದೆ. ಪ್ರಭಾವಿ ಒಕ್ಕಲಿಗ ನಾಯಕರಾಗಿರುವ ಡಿ.ಕೆ. ಶಿವಕುಮಾರ್ ರಾಜ್ಯದಾದ್ಯಂತ ತಮ್ಮದೇ ಆದ ಬೆಂಬಲಿಗರನ್ನು ಹೊಂದಿದ್ದು,
ಜೊತೆಗೆ ಕಾಂಗ್ರೆಸ್ ಸಂಕಷ್ಟಕ್ಕೆ ಸಿಲುಕಿದ ಸಂದರ್ಭಗಳಲ್ಲೆಲ್ಲ ಪಕ್ಷದೊಂದಿಗೆ ನಿಂತಿರುವ ಡಿ.ಕೆ. ಶಿವಕುಮಾರ್ ಅವರಿಗೆ ಈ ಮೂಲಕ ಉಡುಗೊರೆ ನೀಡಲು ತೀರ್ಮಾನಿಸಲಾಗಿದೆ ಎಂದು ಹೇಳಲಾಗಿದೆ ಆದರೆ ಡಿಕೆ ಶಿವಕುಮಾರ್ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಯಾವ ಸ್ಥಾನವನ್ನು ಕೊಡುತ್ತೇ ಕಾದು ನೋಡಬೇಕಿದೆ ರಾಜ್ಯದಲ್ಲಿ ಕಾಂಗ್ರೆಸ್ ನೆಲಕಚ್ಚಿದ್ದರೂ ಸಹ ಅದನ್ನು ಎತ್ತಿ ಹಿಡಿಯುವ ಸಾಮರ್ಥ್ಯವನ್ನು ಡಿಕೆ ಶಿವಕುಮಾರ್ ಅವರು ಹೊಂದಿದ್ದಾರೆ ಎಂದು ಕಾಂಗ್ರೆಸ್ ಹೈಕಮಾಂಡ್ ಗೆ ತಿಳಿದಿದೆ .ಕಾಂಗ್ರೆಸ್ ರಾಜ್ಯದಲ್ಲಿ ಮುಂದೆ ಯಾವ ನಿರ್ಧಾರವನ್ನು ತೆಗೆದುಕೊಳ್ಳುತ್ತದೆ ಮುಂದಿನ ನಡೆ ಏನು ಎಂದು ರಾಜ್ಯ ರಾಜಕಾರಣದಲ್ಲಿ ಕುತೂಹಲ ಕ್ಕೀಡಾಗಿದೆ ಇನ್ನು ರಾಹುಲ್ ಗಾಂಧಿ ಅವರು ಮೋದಿ ಹಾಗೂ ಮೋದಿ ಸರ್ಕಾರದ ವಿರುದ್ಧ ಹೇಳಿಕೆಗಳನ್ನು ಕೊಟ್ಟಿದ್ದಕ್ಕೆ ರಾಜ್ಯದಲ್ಲಿ ಕಾಂಗ್ರೆಸಿಗರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ .