ಉಪಚುನಾವಣೆಯಲ್ಲಿ ಕಾಂಗ್ರೆಸ್ ನ ರಿಜ್ವಾನ್ ಅರ್ಷದ್ ಅವರು ಶಿವಾಜಿನಗರ ಕ್ಷೇತ್ರದಿಂದ ಕಣಕ್ಕಿಳಿದು ಜಯಭೇರಿ ಬಾರಿಸಿ ಎಲ್ಲರ ಗಮನವನ್ನು ಸೆಳೆದಿದ್ದರು ಇದೀಗ ಅವರು ಒಂದು ಸಭೆಯಲ್ಲಿ ಮೋದಿ ಸರ್ಕಾರ ಮಾಡಿದ ಪೌರತ್ವ ತಿದ್ದುಪಡಿ ಕಾಯ್ದೆಯ ಬಗ್ಗೆ ಮಾತನಾಡಿದರು ಸ್ವಾತಂತ್ರ ಬಂದು 70 ವರ್ಷಗಳ ನಂತರ ಬಿಜೆಪಿ ಸರಕಾರಕ್ಕೆ ಏಕಾಏಕಿ ಪೌರತ್ವ ತಿದ್ದುಪಡಿ ಕಾನೂನು ಜಾರಿ ಮಾಡುವ ಅಗತ್ಯವಾದರೂ ಏನಿತ್ತು ಎಂದು ಪ್ರಶ್ನಿಸಿದರು.
ಮುಸ್ಲಿಮರಿಗೆ 50 ರಾಷ್ಟ್ರಗಳಿವೆ, ಹಿಂದೂಗಳಿಗೆ ಭಾರತ ಬಿಟ್ಟು ಬೇರೆ ಯಾವ ದೇಶವಿದೆ ಎಂದು ಪ್ರಶ್ನಿಸಲಾಗುತ್ತಿದೆ. ಸೌದಿ ಅರೇಬಿಯಾ ಹಾಗೂ ವ್ಯಾಟಿಕನ್ ಸಿಟಿ ಸೇರಿದಂತೆ ವಿಶ್ವದ ಯಾವುದಾದರೂ ದೇಶ ಹಿಂದೂಗಳಿಗೆ ಪೌರತ್ವ ನೀಡಲು ನಿರಾಕರಿಸಿದೆಯೇ? ಎಂದು ಶಾಸಕ ರಿಝ್ವಾನ್ ಅರ್ಷದ್ ಪ್ರಶ್ನಿಸಿದರು. ಪೌರತ್ವ ತಿದ್ದುಪಡಿ ಕಾನೂನು ವಿರುದ್ಧ ನಾವು ಕಾನೂನು ಹೋರಾಟ ಮಾಡುತ್ತೇವೆ. ದೇಶದ ಸ್ವಾತಂತ್ರಕ್ಕಾಗಿ ನಮ್ಮ ಕೊಡುಗೆಯೂ ಇದೆ. ಸಂವಿಧಾನ ಇನ್ನೂ ಜೀವಂತವಾಗಿದೆ ಎಂದು ಮೋದಿ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು .