ಪಾಕಿಸ್ತಾನದ ಮಾಜಿ ಸರ್ವಾಧಿಕಾರಿ ಪರ್ವೇಜ್ ಮುಷಾರಫ್ಗೆ ಪೇಶಾವರ ವಿಶೇಷ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿದೆ. ಪಾಕ್ ಸೇನಾಧಿಕಾರಿಯಾಗಿದ್ದ ಮುಷರಫ್ 1999 ರಿಂದ 2008ರವೆರೆಗ ಪಾಕಿಸ್ತಾನದ ಸರ್ವಾಧಿಕಾರಿಯಾಗಿ ಆಡಳಿತ ನಡೆಸಿದ್ದರು. 2007ರಲ್ಲಿ ಪರ್ವೇಜ್ ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿದ್ದರು. ನವಾಜ್ ಷರೀಫ್ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ, 2013ರಲ್ಲಿ ಪರ್ವೇಜ್ ಮುಷರಫ್ ವಿರುದ್ಧ ಪ್ರಕರಣ ದಾಖಲಾಗಿತ್ತು.
ದೇಶದ್ರೋಹದ ಆ ಪ್ರಕರಣಕ್ಕೆ ಸಂಬಧಿಸಿದಂತೆ ನ್ಯಾಯಾಲಯ ಶಿಕ್ಷೆ ಪ್ರಕಟಿಸಿದೆ. ಕಳೆದ ನಾಲ್ಕು ವರ್ಷದ ಹಿಂದೆ ಲಂಡನ್ಗೆ ಕಾಲ್ಕಿತ್ತಿದ್ದರು. ಕಳೆದ ಎಲೆಕ್ಷನ್ ಟೈಮಲ್ಲಿ ಪಾಕ್ ಗೆ ವಾಪಸ್ಸಾಗಿ ಚುನಾವಣೆಗೆ ಸ್ಪರ್ಧಿಸುವ ಪ್ರಯತ್ನ ಮಾಡಿದ್ದರು.ಸದ್ಯ ಅನಾರೋಗ್ಯದಿಂದ ದುಬೈನಲ್ಲಿದ್ದಾರೆನ್ನಲಾಗಿದೆ.
ಪಾಕಿಸ್ತಾನದ ಮಾಜಿ ಸರ್ವಾಧಿಕಾರಿ ಮುಷರಫ್ಗೆ ಗಲ್ಲು !
Date: