ಅವಳನ್ನು ಪ್ರೀತಿಸಿ ಮದುವೆಯಾದ ಅವನೇ ಅವಳನ್ನು ಕೊಂದ!

Date:

ಅವರಿಬ್ಬರು ಪರಸ್ಪರ ಪ್ರೀತಿಸಿ ಮದುವೆಯಾದವರು. ಎರಡೂ ಕುಟುಂಬದ ವಿರೋಧ ಕಟ್ಟಿಕೊಂಡು ಹೊಸ ಜೀವನ ಆರಂಭಿಸಿದ ಅವರ ನಡುವೆ ಅದ್ಯಾವ ವಿಷಯಕ್ಕೆ ಜಗಳವಾಯಿತೋ ಆಕೆಯ ಕೊಲೆಯಲ್ಲಿ ಪ್ರೀತಿ, ಜಗಳ ಎಲ್ಲವೂ ಅಂತ್ಯವಾಯಿತು.
ಹೌದು ಪತಿಯೇ ಪ್ರೀತಿಸಿ ಮದುವೆಯಾಗಿದ್ದ ಪತ್ನಿಯ ಕತ್ತು ಹಿಸುಕಿ ಕೊಲೆಗೈದಿರುವ ಘಟನೆ ಹರಿಹರ ತಾಲ್ಲೂಕಿನ ಹಿಂಡಸಗಟ್ಟ ಗ್ರಾಮದಲ್ಲಿ ನಡೆದಿದೆ.
ರಂಜಿತಾ (೨೧) ಮೃತ ದುರ್ದೈವಿ. ನಾಗರಾಜ್ ನಾಯ್ಕ್ ಆರೋಪಿ. ಹೂದೋಟಕ್ಕೆ ಹೋಗಿದ್ದಾಗ ಇಬ್ಬರ ನಡುವೆ ಯಾವುದೋ ವಿಷಯಕ್ಕೆ ಜಗಳವಾಗಿದ್ದು, ಆ ಜಗಳ ವಿಕೋಪಕ್ಕೆ ತಿರುಗಿ ನಾಗರಾಜ್ ರಂಜಿತಾಳ ಕತ್ತು ಹಿಸುಕಿ ನಾಗರಾಜ್​ ಹತ್ಯೆಗೈದಿದ್ದಾನೆ. ಕೆಲವು ದಿನಗಳ ಹಿಂದಷ್ಟೇ ಇವರಿಬ್ಬರು ಪೋಷಕರ ವಿರೋಧದ ನಡುವೆ ವಿವಾಹವಾಗಿ, ಸ್ವಗ್ರಾಮದಲ್ಲಿ ವಾಸವಿದ್ದರು. ಮಲೆಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ನಾಗರಾಜ್​​ನನ್ನು ಬಂಧಿಸಲಾಗಿದೆ.

Share post:

Subscribe

spot_imgspot_img

Popular

More like this
Related

ಗುರು ರಾಘವೇಂದ್ರ ಸ್ವಾಮಿಗಳ ಆಲ್ಬಮ್ ಸಾಂಗ್ ” ರಾಯರ ದರ್ಶನ ” ದ ಟೀಸರ್ ಬಿಡುಗಡೆ

ಲಕ್ಷ್ಮೀ ಗಣೇಶ ಪ್ರೋಡಕ್ಷನ್ ಮತ್ತು ದಿ ನ್ಯೂ ಇಂಡಿಯನ್ ಟೈಮ್ಸ್ ಸಂಸ್ಥೆ...

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ ಧಾರವಾಡ:...

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು!

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು! ದಾವಣಗೆರೆ: ಜಿಲ್ಲೆಯ ಜಗಳೂರು ತಾಲೂಕಿನ ಗೋಗುದ್ದು...