ಅಕ್ಟೋಬರ್ನಲ್ಲಿ ಚಂದನ್ ಶೆಟ್ಟಿ ತಮ್ಮ ಆತ್ಮೀಯ ಗೆಳತಿ ನಿವೇದಿತಾ ಗೌಡ ಜೊತೆ ಮೈಸೂರಿನ ಖಾಸಗಿ ಹೋಟೆಲಿನಲ್ಲಿ ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಇದೀಗ ಮನೆಯವರು ಮದುವೆ ಬಗ್ಗೆ ಮಾತನಾಡುತ್ತಿದ್ದಾರೆ ಹಾಗಾಗಿ ಪೆಬ್ರವರಿ ತಿಂಗಳ ಕೊನೆಯಲ್ಲಿ ಈ ಜೋಡಿ ಮದುವೆಯಾಗಲಿದ್ದಾರೆ ಎನ್ನಲಾಗುತ್ತಿದೆ . ತಮ್ಮ ಹಾಡುಗಳ ಮೂಲಕ ಲಕ್ಷಾಂತರ ಅಭಿಮಾನಿಗಳನ್ನು ಹೊಂದಿರುವ ಚಂದನ್ ಇದೀಗ ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ.
ಯುವದಸರ ವೇದಿಕೆಯಲ್ಲಿ ನಿವೇದಿತಾ ಅವರಿಗೆ ಪ್ರಪೋಸ್ ಮಾಡಿದ ಚಂದನ್ ಅದರಿಂದ ಕೊಂಚ ವಿವಾದಕ್ಕೆ ಈಡಾಗಿದ್ದರು ನಂತರ ಅದಕ್ಕೆ ಕ್ಷಮೆ ಯಾಚಿಸಿದ ಜೋಡಿ ಇದೀಗ ಮದುವೆಯ ತಯಾರಿಯಲ್ಲಿದೆ ಎಂದು ಹೇಳಲಾಗುತ್ತಿದೆ. ಇನ್ನು ದಿನಾಂಕ ನಿಗದಿಯಗಿಲ್ಲ ಆದರೆ ಫೆಬ್ರವರಿ ತಿಂಗಳ ಕೊನೆಯಲ್ಲಿ ಮದುವೆ ಆಗಲಿದ್ದಾರೆ ಎಂದು ಹೇಳಲಾಗುತ್ತಿದೆ.