ನಿನ್ನೆ ಕಟಕ್ ನ ಬಾರಾಬತಿ ಕ್ರೀಡಾಂಗಣದಲ್ಲಿ ನಡೆದ ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯ ಮೂರನೇ ಹಾಗೂ ನಿರ್ಣಾಯಕ ಪಂದ್ಯದಲ್ಲಿ ಭಾರತ ಭರ್ಜರಿ ಜಯದೊಂದಿಗೆ 2 -1 ಅಂತರದಲ್ಲಿ ಸರಣಿ ಜಯಿಸಿದೆ.
ಈ ಪಂದ್ಯ ಭಾರಿ ರೋಚಕವಾಗಿದ್ದು ಭಾರತದ ರೋಹಿತ್ ಶರ್ಮಾ 63 ರನ್ ಗಳಿಸುವ ಮೂಲಕ ಶ್ರೀಲಂಕಾ ತಂಡದ ಮಾಜಿ ಆಟಗಾರ ಸನತ್ ಜಯಸೂರ್ಯ 22 ವರ್ಷಗಳ ಹಿಂದೆ ನಿರ್ಮಿಸಿದ್ದ ಗರಿಷ್ಠ ರನ್ ದಾಖಲೆ ಮುರಿದಿದ್ದಾರೆ. ಟೆಸ್ಟ್, ಏಕದಿನ ಮತ್ತು ಟಿ-20 ಪಂದ್ಯಗಳಲ್ಲಿ ವರ್ಷವೊಂದರಲ್ಲಿ ಗರಿಷ್ಠ ರನ್ ಗಳಿಸಿದ ಆರಂಭಿಕ ಆಟಗಾರರ ಪಟ್ಟಿಯಲ್ಲಿ ರೋಹಿತ್ ಶರ್ಮಾ ಮೊದಲ ಸ್ಥಾನಕ್ಕೇರಿದ್ದಾರೆ. ಹಾಗು ಸರಣಿಯಲ್ಲಿ ಭಾರತ ಜಯ ಗಳಿಸಿದ್ದು ಕೊಹ್ಲಿ ಪಡೆ ವೆಸ್ಟ್ ಇಂಡೀಸ್ ಆಟಗಾರರನ್ನು ಸೋಲಿಸಿದ್ದಾರೆ.