ವಾಲ್ಮೀಕಿ ಸಮಾಜಕ್ಕೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು. ಇಲ್ಲದಿದ್ದರೆ, ಸಮಾಜದ ಶಾಸಕರು ರಾಜೀನಾಮೆ ನೀಡಲಿದ್ದಾರೆ ಎಂದು ವಾಲ್ಮೀಕಿ ಸಮಾಜದ ಸ್ವಾಮೀಜಿ ಹೇಳಿದ್ದು, ಅಂತೆಯೇ ನಾವು ರಾಜೀನಾಮೆ ನೀಡಲು ಸಿದ್ಧರಾಗಿದ್ದೇವೆ ಎಂದು ಸಚಿವರು ತಿಳಿಸಿದ್ದಾರೆ.
ಉಪಮುಖ್ಯಮಂತ್ರಿ ಸ್ಥಾನವನ್ನು ರಮೇಶ್ ಜಾರಕಿಹೊಳಿ ಸೇರಿದಂತೆ ವಾಲ್ಮೀಕಿ ಸಮಾಜದ ಯಾರಿಗಾದರೂ ನೀಡಿದರೆ ಸ್ವಾಗತಿಸುತ್ತೇನೆ. ಇಲ್ಲವಾದರೆ ನಮ್ಮ ಸ್ವಾಮೀಜಿ ಹೇಳಿದಂತೆ ನಾನು ಸಹ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧರಾಗಿದ್ದೇನೆ ಎಂದು ಶ್ರೀರಾಮಲು ಹೇಳಿದ್ದಾರೆ