ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕಾನೂನು ಸುವ್ಯವಸ್ಥೆ ಕುರಿತಂತೆ ಸರ್ಕಿಟ್ ಹೌಸ್‍ನಲ್ಲಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಜಿಲ್ಲಾಧಿಕಾರಿ ಸಿಂಧು.ಬಿ ರೂಪೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಶಾಸಕರಾದ ವೇದವ್ಯಾಸ್ ಕಾಮತ್, ಸಂಸದೆ ಶೋಭಾ ಕರಂದ್ಲಾಜೆ ಸೇರಿದಂತೆ ಮತ್ತಿತರ ಜೊತೆ ಸಭೆ ನಡೆಸಿದರು. ಕರಾವಳಿ ತೀರಪ್ರದೇಶ ಸೂಕ್ಷ್ಮ ಪ್ರದೇಶವಾಗಿದ್ದು, ಇಲ್ಲಿ ಕಿಡಿಗೇಡಿಗಳು ಪರಿಸ್ಥಿತಿಯ ಲಾಭ ಪಡೆಯಲು ಯತ್ನಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.
ಮೇಲ್ನೋಟಕ್ಕೆ ಮಂಗಳೂರು ಗಲಭೆ ವ್ಯವಸ್ಥಿತವಾದ ಷಡ್ಯಂತರ ಎಂಬುದು ಕಂಡುಬಂದಿದೆ. ಉದ್ದೇಶಪೂರ್ವಕವಾಗಿಯೇ ಸಂಚು ನಡೆಸಿ ಗಲಭೆ ನಡೆಸಿದ್ದಾರೆ. ಇಂಥವರ ಮೇಲೆ ಹದ್ದಿನ ಕಣ್ಣಿಡುವಂತೆ ಪೊಲೀಸರಿಗೆ ಸೂಚಿಸಿದ್ದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಿಳಿಸಿದರು.