ಕೆಲವುದಿನಗಳ ದಿನಗಳ ಹಿಂದೆಯೇ ಪೇಜಾವರ ಶ್ರೀ ಗಳು ಅನಾರೋಗ್ಯದಿಂದ ಬಳಲುತ್ತಿದ್ದರು ಈ ಕಾರಣಕ್ಕೆ ಚಿಕಿತ್ಸೆ ಪಡೆಯುತ್ತಿದ್ದ ಅವರು ಕೊಂಚ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದಾರೆ ಎಂದು ತಿಳಿದ್ದಿತ್ತು ಆದರೆ ಇದೀಗ ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಕಳೆದ ಒಂದು ವಾರದಿಂದ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶ್ವ ತೀರ್ಥ ಸ್ವಾಮೀಜಿಯವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ಭಕ್ತರಲ್ಲಿ ಆತಂಕ ಮನೆ ಮಾಡಿದೆ. ಶ್ರೀಗಳು ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಎನ್ನಲಾಗುತ್ತಿದ್ದು, ಕ್ಷಣ ಕ್ಷಣಕ್ಕೂ ಆರೋಗ್ಯ ಸ್ಥಿತಿ ಕ್ಷೀಣಿಸುತ್ತಿದೆ. ದೆಹಲಿಯ ಏಮ್ಸ್ ಹಾಗೂ ಬೆಂಗಳೂರು ಸೇರಿದಂತೆ ನುರಿತ ತಜ್ಞರ ವೈದ್ಯರ ತಂಡ ನಿರಂತರವಾಗಿ ಚಿಕಿತ್ಸೆ ನೀಡಲು ಪ್ರಯತ್ನಿಸುತ್ತಿದೆ.
ಸಿಎಂ ಯಡಿಯೂರಪ್ಪ ಅವರು ಕೂಡ ಉಡಿಪಿಗೆ ಇದ್ದಕಿದ್ದಂತೆ ಬಂದಿದ್ದಾರೆ ಇದರಿಂದ ಭಕ್ತಾದಿಗಳು ಆತಂಕಕ್ಕೆ ಒಳಗಾಗಿದ್ದಾರೆ. ವೈದ್ಯರ ಬಳಿ ನಿರಂತರವಾಗಿ ಸಂಪರ್ಕದಲ್ಲಿದ್ದಾರೆ ಎಂದು ಹೇಳಲಾಗುತ್ತಿದೆ.