ಉಡುಪಿಯ ಅಷ್ಟಮಠಗಳಲ್ಲಿ ಒಂದಾಗಿರುವ ಪೇಜಾವರ ಮಠದ ಮುಖ್ಯಸ್ಥರಾಗಿದ್ದ ಶ್ರೀ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ, ‘ಪೇಜಾವರ ಶ್ರೀಗಳು’ ಅನಾರೋಗ್ಯದ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಗ್ಯ ಪರಿಸ್ಥಿತಿ ಗಂಭೀರವಾಗಿ ಚೇತರಿಸಿಕೊಳ್ಳದ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ 6.55ರ ಸುಮಾರಿಗೆ ಪೇಜಾವರ ಮಠಕ್ಕೆ ಸ್ಥಳಾಂತರ ಮಾಡಲಾಗಿತ್ತು. ಮಠದ ಕೊಠಡಿಯಲ್ಲಿಯೇ ಐಸಿಯುನಂತಹ ವಾತಾವರಣದಲ್ಲಿ ಚಿಕಿತ್ಸೆ ನೀಡಲು ಆರಂಭಿಸಲಾಗಿತ್ತು. ಆದರೂ, ಚಿಕಿತ್ಸೆ ಫಲಕಾರಿಯಾಗದೆ ಶ್ರೀಗಳು ಇಂದು ಕೊನೆಯುಸಿರೆಳೆದಿದ್ದಾರೆ. ಈ ಹಿನ್ನೆಲೆಯಲ್ಲಿ ಉಡುಪಿಗೆ ಶ್ರೀಗಳ ಭಕ್ತಾದಿಗಳು ಹಾಗೂ ಉಡುಪಿ ಕೃಷ್ಣ ಮಠದ ಭಕ್ತಾದಿಗಳು ಭೇಟಿ ನೀಡುವ ಸಾಧ್ಯತೆ ಇದೆ ಹಾಗಾಗಿ ಉಡುಪಿ ಕೃಷ್ಣ ಮಠದ ಸುತ್ತ ಬಿಗಿ ಬಂದೋಬಸ್ತ್ ಆಯೋಜಿಸಲಾಗಿದೆ .
ಪೇಜಾವರ ಮಠದ ಮುಖ್ಯಸ್ಥರಾಗಿದ್ದ ಶ್ರೀ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ಇನ್ನಿಲ್ಲ !
Date: