ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷನಾಗಿ ಚಿತ್ರರಂಗದ ಏಳಿಗೆಗೆ ಶ್ರಮಿಸುತ್ತೇನೆ ಎಂದು ಚಲನಚಿತ್ರ ಅಕಾಡೆಮಿ ನೂತನ ಅಧ್ಯಕ್ಷ ಸುನೀಲ್ ಪುರಾಣಿಕ್ ಇಂದಿಲ್ಲಿ ತಿಳಿಸಿದರು. ಚಲನಚಿತ್ರ ವಾಣಿಜ್ಯ ಮಂಡಳಿ, ನಿರ್ದೇಶಕರು, ನಿರ್ಮಾಪಕರು ಹಾಗೂ ತಂತ್ರಜ್ಞರು ಸೇರಿದಂತೆ ಇನ್ನಿತರ ಸಂಘಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಎಲ್ಲರನ್ನೂ ಒಗ್ಗೂಡಿಸಿಕೊಂಡು ಅವರ ಸಮಸ್ಯೆಗಳಿಗೆ ಸ್ಪಂದಿಸಿ ಕೆಲಸ ಮಾಡುವುದಾಗಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿ ವರ್ಷ ಜನವರಿಯಲ್ಲಿ ನಡೆಯುವ ಬೆಂಗಳೂರು ಅಂತಾ ರಾಷ್ಟ್ರೀಯ ಚಲನಚಿತ್ರೋತ್ಸವ ನಡೆಸಿದ ನಂತರ ತಟಸ್ಥವಾಗುವ ಅಕಾಡೆಮಿ ಅದಕ್ಕೆ ಮಾತ್ರ ಸೀಮಿತವಾಗದಂತೆ ವರ್ಷದ 365 ದಿನಗಳು ಸಕ್ರಿಯವಾಗಿ ಅಕಾಡೆಮಿಯ ಬೆಳವಣಿಗೆಗೆ ಪೂರಕವಾಗಿ ಕಾರ್ಯ ನಿರ್ವಹಿಸಲಾಗುವುದು ಎಂದರು.