ಸಭೆಯಲ್ಲಿ ವಾಲ್ಮೀಕಿ ಸಮಾಜಕ್ಕೆ ಶೇಕಡ 7.5 ರಷ್ಟು ಮೀಸಲಾತಿ ನೀಡಬೇಕೆಂಬ ವಿಚಾರವಾಗಿ ಸಿಎಂ ಭೇಟಿ ಮಾಡಲು ತೀರ್ಮಾನಿಸಲಾಗಿದೆ. ವಾಲ್ಮೀಕಿ ಜಾತ್ರೆಯ ವೇಳೆಗೆ ಸರ್ಕಾರ ಮೀಸಲಾತಿ ಘೋಷಿಸಬೇಕು. ಇಲ್ಲದಿದ್ದರೆ ಸಮಾಜದ ಎಲ್ಲಾ ಶಾಸಕರ ಸಚಿವರ ಸಭೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳಲಿದ್ದು ಅದು ಕಠೋರವಾಗಿರುತ್ತದೆ ಎಂದು ಶ್ರೀ ಪ್ರಸನ್ನಾನಂದ ಶ್ರೀಗಳು ಹೇಳಿದ್ದಾರೆ.
ಇದೇ ವೇಳೆ ಮಾತನಾಡಿದ ಆರೋಗ್ಯ ಸಚಿವ ಬಿ. ಶ್ರೀರಾಮುಲು, ಸಂಕ್ರಾಂತಿ ನಂತರ ಸಂಪುಟ ವಿಸ್ತರಣೆ ಆಗಲಿದ್ದು ಉಪಚುನಾವಣೆಯಲ್ಲಿ ಗೆದ್ದವರಿಗೆ ಸಚಿವ ಸ್ಥಾನ ನೀಡುವ ಕುರಿತು ಮುಖ್ಯಮಂತ್ರಿ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಹೇಳಿದರು.